ಕರ್ನಾಟಕ

karnataka

ETV Bharat / state

ಕುಸಿದ ಆರ್ಥಿಕ ಪರಿಸ್ಥಿತಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - Congress protests in Chamarajanagar against central government

ನಿರಂತರವಾಗಿ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿಯುತ್ತಿದ್ದು, ಬಡವರು ಮತ್ತು ಮಧ್ಯಮ ವರ್ಗದ ಜನ ಬದುಕಲು ಹೋರಾಡಬೇಕಾದ ಪರಿಸ್ಥಿತಿ ತಲೆದೋರಿದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದೆ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

By

Published : Nov 21, 2019, 2:34 PM IST

ಚಾಮರಾಜನಗರ: ದೇಶದ ಅರ್ಥ ವ್ಯವಸ್ಥೆ ನಿರಂತರವಾಗಿ ಕುಸಿಯುತ್ತಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನದ ಮುಂಭಾಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ವಿರುದ್ಧ ಧಿಕ್ಕಾರ ಕೂಗಿದ್ರು.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಇನ್ನಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು, ಇಲ್ಲದಿದ್ದಲ್ಲಿ ದೇಶಾದ್ಯಂತ ಉಗ್ರ ರೀತಿಯ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details