ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ - Delivery for women who infected from corona

ದಿನ ತುಂಬಿದ್ದರಿಂದ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾಗಿದೆ. ಕೊರೊನಾ ಕಾರಣದಿಂದಾಗಿ ಕೋವಿಡ್-19 ಆಸ್ಪತ್ರೆಯಲ್ಲಿನ ಹಳೇ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಆಪರೇಷನ್ ಮಾಡಲಾಗಿದೆ.‌.

Delivery for women who infected from corona
Delivery for women who infected from corona

By

Published : Jul 19, 2020, 8:36 PM IST

ಚಾಮರಾಜನಗರ: ಸೋಂಕಿತ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಇಬ್ಬರೂ ಕ್ಷೇಮವಾಗಿದ್ದಾರೆ.

ಹನೂರು ತಾಲೂಕಿನ ಮಂಗಲ ಗ್ರಾಮದ 21 ವರ್ಷದ ಗರ್ಭಿಣಿ ಕಳೆದ ಎರಡು ದಿನದ ಹಿಂದೆಯಷ್ಟೇ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಗಂಟಲು ದ್ರವ ಮಾದರಿ ತೆಗೆದುಕೊಳ್ಳಲಾಗಿತ್ತು. ಇಂದು ಬೆಳಗ್ಗೆ ಅದರ ವರದಿ ಬಂದು ಸೋಂಕಿರುವುದು ದೃಢಪಟ್ಟಿದೆ.

ದಿನ ತುಂಬಿದ್ದರಿಂದ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾಗಿದೆ. ಕೊರೊನಾ ಕಾರಣದಿಂದಾಗಿ ಕೋವಿಡ್-19 ಆಸ್ಪತ್ರೆಯಲ್ಲಿನ ಹಳೇ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಆಪರೇಷನ್ ಮಾಡಲಾಗಿದೆ. ಮಹಿಳೆ ದಾಖಲಾಗಿದ್ದ ಹೆರಿಗೆ ವಾರ್ಡ್‌ನ ಸೀಲ್‌ಡೌನ್ ಮಾಡಲಾಗಿದೆ.‌

ಮಗುವಿಗೆ ಸೋಂಕು ತಗುಲುವುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ‌.

ABOUT THE AUTHOR

...view details