ಕರ್ನಾಟಕ

karnataka

ETV Bharat / state

ನೋ‌ ವ್ಯಾಕ್ಸಿನೇಷನ್‌- ನೋ ರೇಷನ್, ನೋ ಪೆನ್ಷನ್ ವಿರುದ್ಧ ಡಿಕೆಶಿ ಆಕ್ರೋಶ..! - ಚಾಮರಾಜನಗರ ಜಿಲ್ಲಾಡಳಿತದ ವಿರುದ್ದ ಡಿ.ಕೆ.ಶಿವಕುಮಾರ್ ಆಕ್ಷೇಪ

ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್‌, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೇಸ್​​ ಬುಕ್​​ನಲ್ಲಿ ಡಿಕೆಶಿ ಆಕ್ರೋಶ
ಫೇಸ್​​ ಬುಕ್​​ನಲ್ಲಿ ಡಿಕೆಶಿ ಆಕ್ರೋಶ

By

Published : Aug 31, 2021, 9:42 PM IST

ಚಾಮರಾಜನಗರ: ಲಸಿಕಾ ಅಭಿಯಾನಕ್ಕೆ ವೇಗ ನೀಡಲು "ನೋ ವ್ಯಾಕ್ಸಿನೇಷನ್‌- ನೋ ರೇಷನ್, ನೋ ಪೆನ್ಷನ್" ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದ್ದಾರೆ.

ಫೇಸ್​​ ಬುಕ್​​ನಲ್ಲಿ ಡಿಕೆಶಿ ಆಕ್ರೋಶ

ಚಾಮರಾಜನಗರ ಡಿಸಿ ಡಾ.ಎಂ.ಆರ್.ರವಿ ಅವರ ತೀರ್ಮಾನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು" ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರ ಹೇಳುತ್ತಿದೆ, ಕೋವಿಡ್‌ ಲಸಿಕೆ ಪಡೆಯದಿದ್ರೆ ಪಡಿತರ, ಪಿಂಚಣಿ ಎರಡೂ ಇಲ್ಲ ಅಂತ, ಆದ್ರೆ, ಲಸಿಕೆಗಳು ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ?ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದೀರಾ?ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಅಂತ ಹೆದರಿಸುವುದು ಅಕ್ರಮ, ಅನೈತಿಕ ಹಾಗೂ ಅಸಾಂವಿಧಾನಿಕ ಎಂದು ಕಿಡಿಕಾರಿದ್ದಾರೆ.

ಫೇಸ್​​ ಬುಕ್​​ನಲ್ಲಿ ಡಿಕೆಶಿ ಆಕ್ರೋಶ

ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗ್ಬೇಕು. ಆಕ್ಸಿಜನ್‌ ಪೂರೈಸಲು ಅಸಮರ್ಥರಾಗಿ 36 ಅಮಾಯಕರ ಜೀವ ತೆಗೆದಿದ್ದಾರೆ. ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್‌, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ನೋ ವ್ಯಾಕ್ಸಿನೇಷನ್‌-ನೋ ರೇಷನ್- ನೋ ಪೆನ್ಷನ್‌.. ಚಾಮರಾಜನಗರ ಡಿಸಿ ಮಹತ್ವದ ತೀರ್ಮಾನ..

ಲಸಿಕಾ ಅಭಿಯಾನಕ್ಕೆ ವೇಗ ನೀಡಲು ಮತ್ತು ಅಸಡ್ಡೆ ತೋರುವವರಿಗೆ ಬಿಸಿ ಮುಟ್ಟಿಸಲು ಲಸಿಕೆ ಪಡೆಯದಿದ್ದರೇ, ಪಡಿತರ ಮತ್ತು ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿರುವ ಬಗ್ಗೆ ಈಟಿವಿ ಭಾರತದೊಂದಿಗೆ ಡಿಸಿ ಡಾ.ಎಂ.ಆರ್.ರವಿ ಮಾತನಾಡಿದ್ದರು.

For All Latest Updates

ABOUT THE AUTHOR

...view details