ಕರ್ನಾಟಕ

karnataka

ETV Bharat / state

KPCC Election: ಯಾರು ಬೇಕಾದರೂ ಚುನಾವಣೆಗೆ ನಿಲ್ಲಬಹುದು, ಪಕ್ಷದ ತೀರ್ಮಾನಕ್ಕೆ ಬದ್ಧ - ಡಿಕೆಶಿ

ಕೆಪಿಸಿಸಿ ಚುನಾವಣೆಗೆ ಯಾರು ಬೇಕಾದರೂ ನಿಲ್ಲಬಹುದು. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ. ಕಳೆದ ಮೂರು ವರ್ಷಗಳಲ್ಲಿ ನನ್ನ ಶಕ್ತಿ ಮೀರಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

dk shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

By

Published : Sep 14, 2022, 2:23 PM IST

ಚಾಮರಾಜನಗರ: ಕೆಪಿಸಿಸಿ ಚುನಾವಣೆ ಸಂಬಂಧ ಶೀಘ್ರವೇ ಕೆಪಿಸಿಸಿ ಸದಸ್ಯರ ಸಭೆ ಕರೆಯಲಿದ್ದು, ಪಿಆರ್​ಒ ನಾಸಿಫ್ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಯಾರು ಬೇಕಾದರೂ ನಿಲ್ಲಬಹುದು. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ. ಕಳೆದ ಮೂರು ವರ್ಷಗಳಲ್ಲಿ ನನ್ನ ಶಕ್ತಿ ಮೀರಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ, ಕೆಪಿಸಿಸಿ ಚುನಾವಣೆ ಬಳಿಕ ಎಐಸಿಸಿ ಚುನಾವಣೆ ನಡೆಯಬೇಕಿದ್ದು, ಈ ತಿಂಗಳೊಳಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್

3 ವರ್ಷ ಏನು ಮಾಡ್ತಿದ್ರು: ಮಳೆ ಅವಾಂತರ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಕಾಂಗ್ರೆಸ್ ಕಾರಣ ಎನ್ನುತ್ತಿದ್ದಾರೆ. ಬಿಜೆಪಿಯವರು ಕಳೆದ ಮೂರು ವರ್ಷಗಳಿಂದ ಏನು ಮಾಡುತ್ತಿದ್ದರು, ಅವರ ಪೆನ್ನು- ಕಣ್ಣಿಗೆ ಏನಾಗಿತ್ತು. ತಪ್ಪು ಕಂಡು ಹಿಡಿದು ಗಲ್ಲಿಗೆ ಹಾಕಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಭಾರತ್ ಜೋಡೋ ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಪಕ್ಷಾತೀತವಾಗಿ ಕಾರ್ಯಕ್ರಮ ನಡೆಯುತ್ತಿದೆ. ಉತ್ಸಾಹದಿಂದ ಜನರು ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಇದನ್ನೂ ಓದಿ:ಅ.16 ರಂದು ಕೆಪಿಸಿಸಿ ನೂತನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಡಿ ಕೆ ಶಿವಕುಮಾರ್

ABOUT THE AUTHOR

...view details