ಚಾಮರಾಜನಗರ:ಸಾಂಸಾರಿಕ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಕುಡಿದಿರುವುದಾಗಿ ಪತಿರಾಯನೋರ್ವ ERSS-112 ನಂಬರ್ಗೆ ಕರೆ ಮಾಡಿ ಅಳಲು ತೋಡಿಕೊಂಡಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದ್ದು, ಆತನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಆಲಹಳ್ಳಿ ಗ್ರಾಮದ ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿದ್ದ ಸಂದರ್ಭದಲ್ಲಿ ಪತ್ನಿಯ ಜೊತೆ ಜಗಳ ಮಾಡಿಕೊಂಡಿದ್ದು, ಮಧ್ಯರಾತ್ರಿಯಲ್ಲಿ ತಾನು ಸಾಂಸಾರಿಕ ವಿಚಾರದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿರುವುದಾಗಿ ಕರೆ ಮಾಡಿದ್ದಾನೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಹೊಯ್ಸಳ ವಾಹನದ ಪೊಲೀಸರು ವ್ಯಕ್ತಿಯನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.