ಚಾಮರಾಜನಗರ: ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ಶೆಡ್ಡಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮಲಗಿದ್ದ ವೃದ್ಧೆಯೊಬ್ಬರು ಸಜೀವ ದಹನವಾಗಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದಲ್ಲಿ ನಡೆದಿದೆ. ಬದನಗುಪ್ಪೆ ಗ್ರಾಮದ ಲಕ್ಷ್ಮಮ್ಮ(75) ಮೃತ ದುರ್ದೈವಿಯಾಗಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಈ ಶೆಡ್ಡಿನಲ್ಲಿ ಲಕ್ಷ್ಮಮ್ಮ ಏಕಾಂಗಿಯಾಗಿ ವಾಸಿಸುತ್ತಿದ್ದರು. ಗುರುವಾರ ತಡರಾತ್ರಿ ಉಂಟಾದ ಶಾರ್ಟ್ ಸರ್ಕೂಟ್ ನಿಂದ ಶೆಡ್ಡಿಗೆ ಬೆಂಕಿ ಹೊತ್ತಿಕೊಂಡಿದೆ.