ಚಾಮರಾಜನಗರ:ಆಹಾರ ಅರಸಿ ಬಂದಿದ್ದ ಆನೆಯೊಂದು ಬೆಳೆ ಕಾವಲಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಆಂಡಿಪಾಳ್ಯ ಗ್ರಾಮದಲ್ಲಿ ನಡೆದಿದೆ.
ಬೆಳೆ ಕಾವಲಿಗೆ ಅಕ್ರಮ ವಿದ್ಯುತ್ ಬೇಲಿ: ಆಹಾರ ಅರಸಿ ಬಂದ ಆನೆ ಬಲಿ - ಚಾಮರಾಜನಗರ
ಮೆಕ್ಕೆಜೋಳ ಬೆಳೆ ಕಾವಲಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಅಂದಾಜು 20 ವರ್ಷದ ಗಂಡಾನೆ ಭಾನುವಾರ ಮುಂಜಾನೆ ಮೃತಪಟ್ಟಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆಂಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಭಾಗ್ಯಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆ ಕಾವಲಿಗೆ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಬೇಲಿಯ ವಿದ್ಯುತ್ ಪ್ರವಹಿಸಿ ಅಂದಾಜು 20 ವರ್ಷದ ಗಂಡಾನೆ ಭಾನುವಾರ ಮುಂಜಾನೆ ಮೃತಪಟ್ಟಿದೆ. ಕಾಡಂಚಿನ ಗ್ರಾಮಗಳಲ್ಲಿ ಬೆಳೆ ರಕ್ಷಣೆಗಾಗಿ ಅಕ್ರಮ ವಿದ್ಯುತ್ ಹರಿಬಿಡುವುದು ಸರ್ವೇ ಸಾಮಾನ್ಯವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಚೆಸ್ಕಾಂ ಸಿಬ್ಬಂದಿ ಸಮರ್ಪಕವಾಗಿ ಆಗಾಗ ಪರಿಶೀಲನೆ ಮಾಡದೇ ಇರುವುದರಿಂದ ಈ ರೀತಿಯ ಪ್ರಕರಣಗಳು ಮರುಕಳಿಸುತ್ತಿವೆ ಎನ್ನಲಾಗಿದೆ.
ಬಿಳಿಗಿರಿರಂಗನ ಬೆಟ್ಟ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಭಾಗ್ಯಮ್ಮ ತಲೆ ಮರೆಸಿಕೊಂಡಿದ್ದಾರೆ.