ಚಾಮರಾಜನಗರ:ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿನ ಕೇರಳ ಗಡಿ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ನಕಲಿ ಕೋವಿಡ್ ರಿಪೋರ್ಟ್ ತೋರಿಸಿ ವಂಚಿಸಿದ್ದ ನಾಲ್ವರು ಕೇರಳಿಗರ ವಿರುದ್ಧ ಗುಂಡ್ಲುಪೇಟೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕೇರಳದ ಕೋಝಿಕೋಡ್ ನಿವಾಸಿಗಳಾದ ವಿಜಯ್, ಜಯಪ್ರಕಾಶ್, ಸಂತೋಷ್ ಹಾಗೂ ವಿಜಯನ್ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್ 1860 ರ ಅಡಿ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಒಂದೇ SRFID ಬಳಸಿಕೊಂಡು ಈ ನಾಲ್ವರು ಮೂರು ಕೋವಿಡ್ ನೆಗೆಟಿವ್ ರಿಪೋರ್ಟ್ಗಳನ್ನು ಮನೆಯಲ್ಲೇ ಪ್ರಿಂಟ್ ಮಾಡಿಕೊಂಡು ಬಂದಿರುವುದು ಪರಿಶೀಲನೆ ವೇಳೆ ಗೊತ್ತಾಗಿದೆ. ಬಳಿಕ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ರಾಜ್ಯಕ್ಕೆ ಬರಬೇಕಾದರೆ, ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರುವ ಹಿನ್ನೆಲೆ ಕೆಲವರು ಕಳ್ಳಾಟ ಆಡಲು ಆರಂಭಿಸಿದ್ದಾರೆ.
ಚಾಮರಾಜನಗರದಲ್ಲಿ ಒಂದೇ ದಿನ 464 ಕೇಸ್:ಜಿಲ್ಲೆಯಲ್ಲಿ ಕೊರೊನಾ ಏರುಗತಿ ಕಂಡಿದ್ದು, ಇಂದು ಹೊಸದಾಗಿ 464 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1388 ಕ್ಕೆ ಏರಿಕೆಯಾಗಿದೆ.