ಕರ್ನಾಟಕ

karnataka

ETV Bharat / state

ಕೆರೆಗಳಿಗೆ ನೀರು ತುಂಬಿಸುವಂತೆ ಪ್ರತಿಭಟನೆ: ಜಿಲ್ಲಾಡಳಿತ ಭವನದ ಒಳಗೆ ನುಗ್ಗಿದ ಪ್ರತಿಭಟನಾಕಾರರು

ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತಸಂಘಟನೆಗಳು ನಡೆಸುತ್ತಿವೆ. ಆದರೆ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಆಗಮಿಸದೆ ಬೇರೊಂದು ಕಾರ್ಯಕ್ರಮಕ್ಕೆ ತೆರಳಿದ್ದಾರೆ ಎಂದು ಅರಿತ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನದೊಳಗೆ ನುಗ್ಗಿ ಪ್ರತಿಭಟನೆ ನಡೆಸಿದರು.

By

Published : Feb 15, 2021, 2:52 PM IST

chamarajnagar
ಚಾಮರಾಜನಗರ ಜಿಲ್ಲಾಡಳಿತದ ಬಳೀ ರೈತ ಪ್ರತಿಭಟನೆ

ಚಾಮರಾಜನಗರ: ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಆಗಮಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನದೊಳಗೆ ನುಗ್ಗಿ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಾಲಯದ ಎದುರು ಜಮಾಯಿಸಿದ ರೈತರು ಅಲ್ಲಿಂದ ಮೆರವಣಿಗೆ ಹೊರಟು ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನ ತಲುಪಿ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ತಡೆದು ಪ್ರತಿಭಟನಾ ಸ್ಥಳದಲ್ಲಿ ಕೂರಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸದೇ ಬೇರೊಂದು ಕಾರ್ಯಕ್ರಮಕ್ಕೆ ತೆರಳಿದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನದ ಒಳಗೆ ನುಗ್ಗಿ ಭವನದ ಆವರಣದಲ್ಲಿ ಕುಳಿತು ಕೆಲಕಾಲ ಪ್ರತಿಭಟನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಭವನದ ಒಳಗೆ ನುಗ್ಗಿ ಪ್ರತಿಭಟನೆ ನಡೆಸಿರುವುದು ಜಿಲ್ಲಾಡಳಿತ ಭವನದ ಇತಿಹಾಸದಲ್ಲೇ ಇದೇ ಮೊದಲಾಗಿದೆ.
ಜಿಲ್ಲಾಡಳಿತ ಭವನದ ಒಳಗೆ ನುಗ್ಗುವ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರೊಂದಿಗೆ ಮಾತಿನ ಚಕಮಕಿಯೂ ನಡೆಯಿತು. ಪೊಲೀಸರ ಮಾತಿಗೂ ಜಗ್ಗದ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನದ ಒಳಗೆ ಕುಳಿತು ಪ್ರತಿಭಟನೆ ನಡೆಸಿದರು.

ABOUT THE AUTHOR

...view details