ಚಾಮರಾಜನಗರ: ಸಾಲಬಾಧೆ ತಾಳಕಾರದೇ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ನಾಗವಳ್ಳಿಯಲ್ಲಿ ನಡೆದಿದೆ.
ಹುರುಳಿಗೆ ಸಿಗದ ಬೆಲೆ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ: ಆಸ್ಪತ್ರೆ ಮುಂದೆ ರೈತ ಸಂಘದಿಂದ ಪ್ರತಿಭಟನೆ
ಬೊರ್ವೆಲ್ ನೀರು ಕಡಿಮೆಯಾಗಿ ರಾಗಿ ಮತ್ತು ಹುರುಳಿಗೆ ಸೂಕ್ತ ಬೆಲೆ ಸಿಗದಿದ್ದರಿಂದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡ ನಾಗರಾಜು ಅವರನ್ನು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಾಗವಳ್ಳಿ ಗ್ರಾಮದ ರೈತ ಪುಟ್ಟಸ್ವಾಮಿ (65) ಮೃತ. 4.5 ಲಕ್ಷಕ್ಕೂ ಹೆಚ್ಚಿನ ಹಣವನ್ನು ಬ್ಯಾಂಕು ಮತ್ತಿತ್ತರ ಸಂಸ್ಥೆಗಳಿಂದ ಮೃತರು ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ. ಬೋರ್ವೆಲ್ ನೀರು ಕಡಿಮೆಯಾಗಿ ರಾಗಿ ಮತ್ತು ಹುರುಳಿಗೆ ಸೂಕ್ತ ಬೆಲೆ ಸಿಗದಿದ್ದರಿಂದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡ ನಾಗರಾಜು ಅವರನ್ನು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಬೆಳೆಗೆ ಸೂಕ್ತ ಬೆಲೆ ಸಿಗದಿರುವುದರಿಂದ ರೈತರು ಆತ್ಮಹತ್ಯೆ ದಾರಿ ತುಳಿದಿದ್ದಾರೆಂದು ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಆಸ್ಪತ್ರೆ ಮುಂಭಾಗ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
TAGGED:
ಸಾಲಬಾಧೆ: ರೈತ ಆತ್ಮಹತ್ಯೆ