ಕರ್ನಾಟಕ

karnataka

ETV Bharat / state

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೊಳ್ಳೇಗಾಲದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರ ಹೊರಡಿಸಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಸಂಪೂರ್ಣ ರೈತ ವಿರೋಧಿಯಾಗಿದೆ. ಈ ಕಾಯ್ದೆ ತಿದ್ದುಪಡಿ ಬಂಡವಾಳಶಾಯಿಗಳನ್ನು ಬದುಕಿಸಿ, ರೈತರನ್ನು ಸಂಕಷ್ಟಕ್ಕೆ ತಳ್ಳತ್ತದೆ ಎಂದು ಕೊಳ್ಳೇಗಾಲ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

Protest in Collegela
ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೊಳ್ಳೇಗಾಲದಲ್ಲಿ ಪ್ರತಿಭಟನೆ

By

Published : May 28, 2020, 8:26 PM IST

ಕೊಳ್ಳೇಗಾಲ:ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೊಳ್ಳೇಗಾಲ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೊಳ್ಳೇಗಾಲದಲ್ಲಿ ಪ್ರತಿಭಟನೆ
ಪಟ್ಟಣದ ಕೃಷಿ ಮಾರುಕಟ್ಟೆ ಕಚೇರಿ ಆವರಣದಿಂದ ಪ್ರಮುಖ ರಸ್ತೆ ಮಾರ್ಗವಾಗಿ ತಾಲೂಕು ಕಚೇರಿವರೆಗೂ ಪ್ರತಿಭಟನೆ ನಡೆಸಿದ ನೂರಾರು ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಕಾಯ್ದೆ ಕೈ ಬಿಡುವಂತೆ ಒತ್ತಾಯಿಸಿದ್ದಾರೆ.

ತಾಲೂಕು ರೈತ ಸಂಘದ ಅಧ್ಯಕ್ಷ ಗೌಡೇಗೌಡ ಮಾತನಾಡಿ ಎಪಿಎಂಸಿ ಕಾಯ್ದೆ ಸಂಪೂರ್ಣ ರೈತ ವಿರೋಧಿಯಾಗಿದೆ. ಇದರಿಂದ ಎಪಿಎಂಸಿ ತನ್ನ ಅಸ್ತಿತ್ವವನ್ನು ಕಳೆದುಕೊಂಡು ಖಾಸಗೀಕರಣದ ಒಡೆತನ‌ ಬೇರೂರುತ್ತದೆ. ಆದ್ದರಿಂದ ತಿದ್ದುಪಡಿ ಕಾಯ್ದೆಯನ್ನು ಈ ಕೂಡಲೇ ಕೇಂದ್ರ ಸರ್ಕಾರ ವಜಾಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ‌ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಈ ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಕುನಾಲ್​ ಅವರ ಮೂಲಕ ಒತ್ತಾಯದ ಮನವಿ ಪತ್ರ ಸಲ್ಲಿಸಿದರು.

ABOUT THE AUTHOR

...view details