ಕರ್ನಾಟಕ

karnataka

ETV Bharat / state

ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಧ್ವಜ ಹಿಡಿದ ವ್ಯಕ್ತಿ ವಿರುದ್ಧ FIR

ಭಾರತ್ ಜೋಡೋ ಯಾತ್ರೆಯಲ್ಲಿ ವಿಜಯಪುರ ಜಿಲ್ಲೆಯ ಯುವಕನೋರ್ವ PAYCM ಟೀ ಶರ್ಟ್ ಹಾಗೂ ಧ್ವಜ ಹಿಡಿದು ಹೆಜ್ಜೆ ಹಾಕಿದ್ದ. ಇದಕ್ಕೆ ಸಂಬಂಧಿಸಿದಂತೆ ಯುವಕನ ಮೇಲೆ ಸೆನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

bharat jodo yatra
ಪೇಸಿಎಂ ಟೀ ಶರ್ಟ್ ಹಾಕಿದ ಯುವಕ

By

Published : Oct 1, 2022, 9:26 AM IST

ಚಾಮರಾಜನಗರ: ಶುಕ್ರವಾರ ರಾಜ್ಯದಲ್ಲಿ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಹೆಜ್ಜೆ ಹಾಕಿದ್ದ ಯುವಕನ ಮೇಲೆ ಎಫ್ಐಆರ್ ದಾಖಲಾಗಿದೆ.

ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಜೋಡೋ ಯಾತ್ರೆಯಲ್ಲಿ ಈತ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಹೆಜ್ಜೆ ಹಾಕಿದ್ದು, ಬಿಜೆಪಿ 40% ಸರ್ಕಾರ, ಯುವಕರಿಗೆ ಉದ್ಯೋಗ ಕೊಡದೆ ಬೀದಿಪಾಲು ಮಾಡುತ್ತಿದೆ. ಈ ಸರ್ಕಾರವನ್ನು ತೆಗೆದೇ ತೆಗೆಯುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದರ ಬಗ್ಗೆ ಈಟಿವಿ ಭಾರತ ವರದಿ ಬಿತ್ತರಿಸಿತ್ತು.

ದೂರು ಪ್ರತಿ

ಇದನ್ನೂ ಓದಿ:ಜೋಡೋ ಯಾತ್ರೆಯಲ್ಲಿ PAY CM ಟೀ ಶರ್ಟ್, ಧ್ವಜ ಹಿಡಿದು ಬಂದ ಯುವಕ: ಸರ್ಕಾರದ ವಿರುದ್ಧ ಆಕ್ರೋಶ

ವರದಿ ಕಂಡು ಗುಂಡ್ಲುಪೇಟೆ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬುವರು ಚಾಮರಾಜನಗರ ಸಿಇಎನ್ ಠಾಣೆಗೆ ದೂರು ನೀಡಿದ್ದು, ರಾಜ್ಯದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವ ಈ ಯುವಕನನ್ನು ಶೀಘ್ರವಾಗಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಯುವಕನ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details