ಚಾಮರಾಜನಗರ:ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಮಾರು 50 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.
ಹನೂರು ವನ್ಯಜೀವಿ ವಲಯದ ಬಂಡಳ್ಳಿ ಬೀಟ್ನ ಬಾವಿಗುಡ್ಡ ಬಳಿ ಶುಕ್ರವಾರ ಮಧ್ಯಾಹ್ನದ ವೇಳೆ ಕಾಣಿಸಿಕೊಂಡ ಬೆಂಕಿ ರಾತ್ರಿ 2 ಗಂಟೆಯವರೆಗೂ ನಿರಂತರವಾಗಿ ಉರಿದಿದೆ. ವಲಯ ಅರಣ್ಯಾಧಿಕಾರಿ ಸೇರಿದಂತೆ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಕಳೆದ ಮೂರು ದಿನಗಳ ಹಿಂದೆ ಕೊತ್ತನೂರು ವನ್ಯಜೀವಿ ವಲಯದಲ್ಲೂ ಸಾಕಷ್ಟು ಕಡೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಲ್ಲಲ್ಲಿ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.