ಕರ್ನಾಟಕ

karnataka

ETV Bharat / state

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ - Kollegala

ಸೂಳೇರಿಪಾಳ್ಯ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದಿಂದ ಬೆಂಗಳೂರಿಗೆ ಹೊರಟಿದ್ದ ಕಾರಿಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

kollegala
ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ

By

Published : Aug 31, 2021, 10:41 AM IST

ಕೊಳ್ಳೇಗಾಲ:ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ‌ ಸೂಳೇರಿಪಾಳ್ಯದಲ್ಲಿ ನಡೆದಿದೆ.

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ

ಸೂಳೇರಿಪಾಳ್ಯ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದಿಂದ ಬೆಂಗಳೂರಿಗೆ ಹೊರಟಿದ್ದ ಕಾರಿಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಾರು ಕಾಂಚಳ್ಳಿ ಗ್ರಾಮದ ರಾಜು ಎಂಬವರಿಗೆ ಸೇರಿದ್ದಾಗಿದೆ. ಇನ್ನು ಚಾಲಕ ವೆಂಕಟರಾಜು, ಶ್ರೀನಿವಾಸ್ ಮತ್ತು ರಘು ಎಂಬುವವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಎಚ್ಚೆತ್ತ ಚಾಲಕ ಕಾರನ್ನು ನಿಲ್ಲಿಸಿದ್ದಾನೆ. ಕೂಡಲೇ ಎಲ್ಲರೂ ಕಾರಿಂದಿಳಿದು ಬಚಾವಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.

ABOUT THE AUTHOR

...view details