ಕೊಳ್ಳೇಗಾಲ: ತಾಲೂಕಿನ ಸರಗೂರು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆಯೊಂದು ಸಂಪೂರ್ಣ ಭಸ್ಮವಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಬಣವೆ - ಬಣವೆಗೆ ಬೆಂಕಿ
ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆಯೊಂದು ಸಂಪೂರ್ಣ ಭಸ್ಮವಾಗಿರುವ ಘಟನೆ ಸರಗೂರು ಗ್ರಾಮದಲ್ಲಿ ನಡೆದಿದೆ.
ಮೇವಿನ ಬಣವೆಗೆ ಬೆಂಕಿ
ಇದನ್ನೂ ಓದಿ...ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ತೋಟಗಾರಿಕಾ ಅಧಿಕಾರಿ
ಸರಗೂರು ಗ್ರಾಮದ ಬಸವರಾಜು ಎಂಬವರಿಗೆ ಈ ಬಣವೆ ಸೇರಿದೆ. ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಹುಲ್ಲನ್ನು ಸಂಗ್ರಹಿಸಿ ಬಣವೆ ಹಾಕಲಾಗಿತ್ತು. ಬಣವೆ ಸಮೀಪ ಹಾಕಿದ್ದ ಬೆಂಕಿ ಕಿಡಿ ಹಾರಿ ಈ ಅವಘಡ ನಡೆದಿದ್ದು, ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.