ಗುಂಡ್ಲುಪೇಟೆ: ಅರಣ್ಯ ಇಲಾಖೆಯ ಸಿಬ್ಬಂದಿಯ ಯಡವಟ್ಟಿನಿಂದಾಗಿ ಸುಮಾರು ಹತ್ತು ಎಕರೆಯಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದೆ.
ಶನಿವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಗೋಪಾಲಸ್ವಾಮಿ ಬೆಟ್ಟ ವಲಯದ ಚೌಡಹಳ್ಳಿ ಗ್ರಾಮದ ಬಳಿ ಪೈರ್ಲೈನ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಕಂದಾಯ ಭೂಮಿ ಸೇರಿದಂತೆ ಅರಣ್ಯ ಗಡಿ ಭಾಗದಲ್ಲಿ ಪೈರ್ ನಿರ್ಮಿಸುತ್ತ ಮುಂದೆ ಸಾಗುತ್ತಿದ್ದಾಗ ಗಾಳಿಗೆ ಬೆಂಕಿಯ ಕಿಡಿ ಹತ್ತಿಕೊಂಡು ಗುಡ್ಡಕ್ಕೆ ಆವರಿಸಿಕೊಂಡಿದೆ. ಇದರಿಂದಾಗಿ ಗುಡ್ಡ ಪೂರ್ಣ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ವಲಯಾರಣ್ಯಾಧಿಕಾರಿ ನವೀನ್ ಕುಮಾರ್ ಮಾತನಾಡಿ, ಅರಣ್ಯ ಪ್ರತದೇಶಕ್ಕೆ ಬೆಂಕಿ ಬಿದ್ದಿಲ್ಲ, ಲೈನ್ ಮಾಡುವ ಬೆಂಕಿ ಎಂದು ಸಮರ್ಥಿಸಿಕೊಂಡಿದ್ದಾರೆ. ಆದರೆ,
ಇನ್ನೂ ಬೆಂಕಿ ಉರಿಯುತ್ತಲೇ ಇದೆ.