ಕರ್ನಾಟಕ

karnataka

ETV Bharat / state

ಎಂಎಸ್ಐಎಲ್ ವೈನ್ ಶಾಪಿಗೆ ಬೆಂಕಿ.. ಲಕ್ಷಾಂತರ ರೂ. ಮೌಲ್ಯದ ಮದ್ಯ ಅಗ್ನಿಗಾಹುತಿ.. - Fire to the liquor store

ಮದ್ಯದಂಗಡಿಗೆ ಬೆಳಗಿನ ಜಾವ ಬೆಂಕಿ ಬಿದ್ದಿದ್ದು ₹ 2 ಲಕ್ಷ ಹಣ ಹಾಗೂ 4 ಲಕ್ಷ ರೂ. ಮೌಲ್ಯದ ಮದ್ಯ ಅಗ್ನಿಗಾಹುತಿಯಾಗಿದೆ. ವಿಷಯ ಅರಿತ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರಾದರೂ ಸರಕುಗಳೆಲ್ಲ ಸಂಪೂರ್ಣ ಸುಟ್ಟು ಕರಕಲಾಗಿತ್ತು.

Fire to the liquor store in Chamarajanagar
ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ

By

Published : May 11, 2020, 11:35 AM IST

ಚಾಮರಾಜನಗರ :ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ ಬಿದ್ದು ಲಕ್ಷಾಂತರ ರೂ‌. ಮೌಲ್ಯದ ಮದ್ಯ ಸುಟ್ಟು ಭಸ್ಮವಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.

ಬೇಗೂರಿನ ಸೋಮಹಳ್ಳಿ ರಸ್ತೆಯ ಮದ್ಯದಂಗಡಿಗೆ ಬೆಳಗಿನ ಜಾವ ಬೆಂಕಿ ಬಿದ್ದಿದ್ದು ₹2 ಲಕ್ಷ ಹಣ ಹಾಗೂ 4 ಲಕ್ಷ ರೂ. ಮೌಲ್ಯದ ಮದ್ಯ ಅಗ್ನಿಗಾಹುತಿಯಾಗಿದೆ. ವಿಷಯ ಅರಿತ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರಾದರೂ ಸರಕುಗಳು ಸಂಪೂರ್ಣ ಸುಟ್ಟು ಕರಕಲಾಗಿತ್ತು.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿತೇ ಇಲ್ಲವೇ ಉದ್ದೇಶಪೂರ್ವಕವಾಗಿಯೇ ಕಿಡಿಗೇಡಿಗಳು ಬೆಂಕಿ ಹಾಕಿದರೇ ಎಂಬುದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details