ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿ ಕೊರೊನಾಗೆ ಮೊದಲ ಬಲಿ: ಕೊಳ್ಳೇಗಾಲ ಆಸ್ಪತ್ರೆ ಸೀಲ್​​​ಡೌನ್..!? - Chamarajnagr district news

ಚಾಮರಾಜನಗರದ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಆಸ್ಪತ್ರೆಯನ್ನು ಸೀಲ್​​ಡೌನ್​​ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

First corona virus infected person dead
ಕೊರೊನಾಗೆ ಮೊದಲ ಬಲಿ

By

Published : Jul 11, 2020, 8:34 PM IST

ಚಾಮರಾಜನಗರ: ಮಹಾಮಾರಿ ಕೊರೊನಾ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ ಎಂದು ಉನ್ನತ ಮೂಲಗಳು ಈಟಿವಿ ಭಾರತಕ್ಕೆ ತಿಳಿಸಿವೆ.

ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹನೂರು ತಾಲೂಕಿನ ಕಾಮಗೆರೆಯ 60 ವರ್ಷದ ವ್ಯಕ್ತಿಯೊಬ್ಬರು ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯನ್ನು ಸೀಲ್​​​​​ಡೌನ್ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಎರಡು ದಿನಗಳ ಹಿಂದೆ ಸಾರಿ (SARI) ಪ್ರಕರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ 9 ರ ವೇಳೆಗೆ ಮೃತಪಟ್ಟಿದ್ದು, ಕೊರೊನಾ ಪಾಸಿಟಿವ್ ವರದಿ ಇಂದು ಮಧ್ಯಾಹ್ನ 3 ಗಂಟೆಗೆ ಬಂದಿದೆ ಎಂದು ತಿಳಿದುಬಂದಿದೆ.

ಮೃತರ ಅಂತ್ಯಕ್ರಿಯೆಯನ್ನು ಜಿಲ್ಲಾಡಳಿತ ನಿಗದಿ ಮಾಡಿರುವ ಸರ್ಕಾರಿ ಜಮೀನಿನಲ್ಲಿ ಮಾಡಲಾಗುತ್ತದೆ ಎನ್ನಲಾಗಿದೆ. ಪಿಎಫ್​ಐ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ABOUT THE AUTHOR

...view details