ಚಾಮರಾಜನಗರ: ಇದೇ 7ರ ಭಾನುವಾರ ಬೆಳಗ್ಗೆ 11ಕ್ಕೆ ಜಾನಪದ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಅಂಬೇಡ್ಕರ್ ಭವನದವರೆಗೆ ಜಾನಪದ ಕಲಾತಂಡಗಳ ಹಾಗೂ ಎತ್ತಿನಗಾಡಿ ಮೆರವಣಿಗೆ ನಡೆಯಲಿದ್ದು, ಗೊರವರ ಕುಣಿತ, ಕಂಸಾಳೆ, ವೀರಗಾಸೆ, ಡೊಳ್ಳುಕುಣಿತ ಸೇರಿದಂತೆ ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.
34 ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು, ರಾಜ್ಯದ ಇತರೆಡೆಯಿಂದ ಬರುವ ಕಲಾವಿದರಿಗೆ ನಗರದ ಎರಡು ಖಾಸಗಿ ಹೋಟೆಲ್‌ಗಳಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಡಿಸಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ಕುಮಾರ್ ಪ್ರಶಸ್ತಿ ಪುರಸ್ಕೃತರ ಪುಸ್ತಕ ಬಿಡುಗಡೆ ಮಾಡುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಹೆಸರಾಂತ ಸಂಗೀತ ನಿರ್ದೇಶಕ ಹಂಸಲೇಖ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಬಿ.ಮಂಜಮ್ಮ ಜೋಗತಿ ಉಪಸ್ಥಿತರಿರುವರು.