ಕರ್ನಾಟಕ

karnataka

ETV Bharat / state

ಬಿಜೆಪಿ ಮಾಜಿ ಶಾಸಕನ ಹುಟ್ಟುಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್‌ಗೆ ಸನ್ಮಾನ - Chamarajanagar News

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ 58ನೇ ಹುಟ್ಟುಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್​ಗೆ ಪುಷ್ಪವೃಷ್ಟಿ ಮಾಡಿ ಸನ್ಮಾನಿಸಲಾಯಿತು.

Former BJP MLA GN Nanjundaswamy Birthday
ಬಿಜೆಪಿ ಮಾಜಿ ಶಾಸಕನ ಹುಟ್ಟುಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

By

Published : Jun 8, 2020, 7:51 PM IST

ಕೊಳ್ಳೇಗಾಲ(ಚಾಮರಾಜನಗರ): ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ 58ನೇ ಹುಟ್ಟುಹಬ್ಬವನ್ನ ಅವರ ಅಭಿಮಾನಿ ಬಳಗದಿಂದ ವಿಶೇಷವಾಗಿ ಆಚರಿಸಲಾಯಿತು.

ಬಿಜೆಪಿ ಮಾಜಿ ಶಾಸಕನ ಹುಟ್ಟುಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಮೇಲೆ ಪುಷ್ಪವೃಷ್ಟಿ ಮಾಡಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ನಂಜುಂಡಸ್ವಾಮಿ, ಕೊರೊನಾ ವಿರುದ್ಧ ಎಲ್ಲಾ ರಾಷ್ಟ್ರಗಳು ಹೋರಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೊರೊನಾ ವಾರಿಯರ್ಸ್​ ಜೀವದ ಹಂಗು ತೊರೆದು ಕಳೆದ 4 ತಿಂಗಳಿನಿಂದ ಕೆಲಸ ಮಾಡುತ್ತಿದ್ದಾರೆ.

ಕೊರೊನಾ ವಾರಿಯರ್ಸ್​ಗೆ ನನ್ನ ಅಭಿಮಾನಿ ಬಳಗ ಅಭಿನಂದನಾ ಸಮಾರಂಭ ಏರ್ಪಡಿಸಿರುವುದು ನನಗೆ ಸಂತಸ ತಂದಿದೆ ಎಂದರು.

ABOUT THE AUTHOR

...view details