ಕರ್ನಾಟಕ

karnataka

ETV Bharat / state

ಹೊಲಕ್ಕೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ ಹಾವು ಕಚ್ಚಿ ಬಾಲಕಿ ಸಾವು

ಹನೂರು ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದವರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟಿದ್ದಾಳೆ.

girl died
ಬಾಲಕಿ ಸಾವು

By

Published : Oct 8, 2022, 2:23 PM IST

ಚಾಮರಾಜನಗರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ತನ್ನ ಕುಟುಂಬ ಸದಸ್ಯರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ ಹಾವು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ನಡೆದಿದೆ.

ಕೋಣನಕೆರೆ ಗ್ರಾಮದ ಮಾದಯ್ಯ ಎಂಬುವರ ಪುತ್ರಿ ಶ್ರೇಯಾ (16 ವರ್ಷ) ಮೃತಳು. ಹೊಲಕ್ಕೆ ಊಟ ತೆಗೆದುಕೊಂಡು ಹೋಗುತ್ತಿರುವಾಗ ಹಾವು ಕಚ್ಚಿದೆ.‌ ಕಾಮಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾಳೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಭದ್ರಾವತಿಯ ಸ್ನೇಕ್ ಮಾಸ್ಟರ್​​​

ABOUT THE AUTHOR

...view details