ಚಾಮರಾಜನಗರ: ಇದೇ ಮೊದಲ ಬಾರಿಗೆ ಸರ್ಕಾರದ ನಿರ್ದೇಶನದಂತೆ ಬಲಿಪಾಡ್ಯಮಿ ದಿನವಾದ ಇಂದು ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಅದ್ಧೂರಿಯಾಗಿ ಗೋ ಪೂಜೆ ನೆರವೇರಿಸಲಾಯಿತು.
ನಾಡಿನ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ, ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ಸ್ವಾಮಿ ದೇಗುಲ, ಚಾಮರಾಜನಗರದ ಚಾಮರಾಜೇಶ್ವರ ದೇವಾಲಯ ಸೇರಿದಂತೆ ಜಿಲ್ಲೆಯ ಮೊದಲನೆ ಮತ್ತು ಎರಡನೇ ದರ್ಜೆಯ ಮುಜರಾಯಿ ದೇವಾಲಯಗಳಲ್ಲಿ ಗೋಧೂಳಿ ಸಮಯದಲ್ಲಿ ಗೋ ಪೂಜೆ ನಡೆಯಿತು.