ಕೊಳ್ಳೇಗಾಲ (ಚಾಮರಾಜನಗರ): ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಕೆಲಸದ ಒತ್ತಡ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಟ್ಟಣ ವ್ಯಾಪ್ತಿಯಲ್ಲಿ ಜರುಗಿದೆ.
ತಾಲೂಕಿನ ಪಾಳ್ಯ ಗ್ರಾಮದ ಲೋಕೇಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಈತ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ನೌಕರನಾಗಿ ಹಾಗೂ ಚುನಾವಣಾ ಶಾಖೆಯಲ್ಲಿ ಕೆಲಸ ಮಾಡಿಕೊಂಡಿದ್ದನು. ಅಲ್ಲಿನ ಕೆಲಸ ಒತ್ತಡವನ್ನು ತಾಳಲಾದರೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಕೆಲಸ ಬದಲಾವಣೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದರೂ ಕೂಡ ಬದಲಾವಣೆ ಮಾಡದಿದ್ದರಿಂದ ಮನನೊಂದು ಮನೆಯಲ್ಲಿದ್ದ ಬಿ.ಪಿ ಮಾತ್ರೆಗಳನ್ನು ಸೇವಿಸಿದ್ದಾನೆ.