ಕೊಳ್ಳೇಗಾಲ :ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯ ಬಳಿ ನಡೆದಿದೆ.
ಪಟ್ಟಣದಿಂದ ರಾಮಾಪುರ ಮಾರ್ಗವಾಗಿ ಹೋಗುತ್ತಿದ್ದ ಸಾರಿಗೆ ಬಸ್ ಚಿಕ್ಕಿಂದುವಾಡಿ ಸಮೀಪದ ರಸ್ತೆಯಲ್ಲಿ ಆಯತಪ್ಪಿ ಹಳ್ಳಕ್ಕೆ ಉರುಳಿದೆ.

ಬಸ್ನಲ್ಲಿ 25ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಮಧುವನಹಳ್ಳಿ ಗ್ರಾಮದಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದ ರಾಧಮ್ಮ ಎಂಬುವರಿಗೆ ಭುಜದ ಮೂಳೆ ಮುರಿದಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳು ರಾಧಮ್ಮನನ್ನು ಕೊಳ್ಳೇಗಾಲ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.