ಚಾಮರಾಜನಗರ :ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದು ಓರ್ವನನ್ನು ಬಂಧಿಸಿರುವ ಘಟನೆ ಮಳವಳ್ಳಿ ತಾಲೂಕಿನ ಬಸವನಬೆಟ್ಟ ಅರಣ್ಯದಲ್ಲಿ ಇಂದು ಮುಂಜಾನೆ ನಡೆದಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ವೆಂಕಟೇಶ ಬಂಧಿತ ಆರೋಪಿ. ಬಸವನಬೆಟ್ಟ ಅರಣ್ಯ ಪ್ರದೇಶದಲ್ಲಿನ ಮುಖ್ಯರಸ್ತೆ ಬದಿಯಲ್ಲಿ ಬೇಟೆಗಾರರು ಅಡಗಿ ಕುಳಿತು ರಸ್ತೆ ದಾಟುವ ಜಿಂಕೆ ಸೇರಿದಂತೆ ಇನ್ನಿತರ ಪ್ರಾಣಿಗಳ ಮೇಲೆ ಗುಂಡು ಹಾರಿಸಿ ಪ್ರಾಣಿಗಳನ್ನ ಭೇಟೆಯಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾವೇರಿ ವನ್ಯಜೀವಿ ಧಾಮದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೇಟೆಗಾರರ ವಿರುದ್ಧ ಗುಂಡಿನ ದಾಳಿ ನಡೆಸಿದ್ದಾರೆ.
ಆಗ ಬೇಟೆಗಾರರು ಸಿಬ್ಬಂದಿ ಮೇಲೆ ದಾಳಿ ಮಾಡಿದ್ದಾರೆ. ಆ ಕೂಡಲೇ ಎಚ್ಚೆತ್ತ ಸಿಬ್ಬಂದಿ ಪ್ರತಿದಾಳಿ ನಡೆಸಿದಾಗ ವೆಂಕಟೇಶ್ ಎಂಬಾತನಿಗೆ ಗುಂಡು ತಗುಲಿ ಸಿಕ್ಕಿ ಬಿದ್ದಿದ್ದಾನೆ. ಈ ಕುರಿತು ಕಾವೇರಿ ವನ್ಯಜೀವಿ ಧಾಮದ ಡಿಸಿಎಫ್ ಗಿರೀಶ್ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.