ಚಾಮರಾಜನಗರ:ಈ ಗ್ರಾಮದಲ್ಲಿ ಪ್ರತಿವರ್ಷ ಸಂಜೆ ಸಮಯ ರಥೋತ್ಸವ ಜರುಗಲಿದ್ದು, ಮಹಿಳೆಯರು ಮತ್ತು ಪುರುಷರು ಪ್ರತ್ಯೇಕವಾಗಿ ರಥ ಎಳೆದು ಇಷ್ಟಾರ್ಥಕ್ಕಾಗಿ ಬೇಡಿಕೊಂಡರು.
ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಗ್ರಾಮದ ಶ್ರೀಪಟ್ಟಲದಮ್ಮ ಜಾತ್ರಾ ಮಹೋತ್ಸವ ಶನಿವಾರ ಪಟ್ಟಲದಮ್ಮ ದೇವಿಯ ಉತ್ಸವ ಮೂರ್ತಿಯನ್ನು ಅಡ್ಡ ಪಲ್ಲಕ್ಕಿಯಲ್ಲಿರಿಸಿ ದೇವಾಲಯದ ಪ್ರದಕ್ಷಿಣೆ ಹಾಕಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ನಂತರ ಸಂಜೆ ಉತ್ಸವ ಮೂರ್ತಿಯನ್ನು ತೇರಿನಲ್ಲಿರಿಸಿ ಪುರುಷರು ರಥ ಎಳೆದರು.