ಕರ್ನಾಟಕ

karnataka

ETV Bharat / state

ರೈತ, ಕೃಷಿ ಕಾರ್ಮಿಕ, ಕಸುಬುದಾರರ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

ರಾಜ್ಯದಲ್ಲಿ ಜಾರಿಯಾದ ಲಾಕ್​ಡೌನ್​ನಿಂದ ನಷ್ಟ ಅನುಭವಿಸುತ್ತಿರುವ ರೈತರು, ಕೃಷಿ ಕಾರ್ಮಿಕರು ಹಾಗೂ ಕಸುಬುದಾರರ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟಿಸಿ ಒತ್ತಾಯಿಸಿತು.

gundlupete-farmers-protest
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ

By

Published : May 28, 2020, 12:13 PM IST

ಗುಂಡ್ಲುಪೇಟೆ: ಲಾಕ್​ಡೌನ್​ನಿಂದಾಗಿ ಸಂಕಷ್ಟದಲ್ಲಿರುವ ರೈತರು, ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಕಸುಬುದಾರರ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ತಾಲೂಕು ಕಚೇರಿ ಮುಂದೆ ಸಾಮಾಜಿಕ ಅಂತರ ಪಾಲಿಸಿ ರೈತ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು. ಈ ವೇಳೆ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ, ಕಾರ್ಪೋರೇಟ್ ಕಂಪನಿಗಳ ಪರವಾದ ರೈತ ವಿರೋಧಿ ಎಪಿಎಂಸಿ ಕಾಯ್ದೆ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರೈತ, ಕೃಷಿ ಕಾರ್ಮಿಕ, ಕಸುಬುದಾರರ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

ಅಲ್ಲದೆ ಬಿಪಿಎಲ್, ಎಪಿಎಲ್ ಕಾರ್ಡ್ ಎಂಬ ತಾರತಮ್ಯವಿಲ್ಲದೆ ಪ್ರತಿ ಕುಟುಂಬಕ್ಕೆ 15 ಕೆಜಿ ರೇಷನ್ ನೀಡಬೇಕು. ರೈತರು, ಕೃಷಿ ಕಾರ್ಮಿಕರು, ಗ್ರಾಮೀಣ ಕಸುಬುದಾರರು ಮತ್ತು ಸ್ತ್ರೀ ಶಕ್ತಿ ಗುಂಪುಗಳ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಎಲ್ಲಾ ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸಿ ಬೆಳೆ ನಷ್ಟಕ್ಕೆ ಸಂಪೂರ್ಣ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಕೃಷಿ ಕೆಲಸಗಳನ್ನು ಸೇರಿಸಿ ಸಮರ್ಪಕವಾಗಿ ಜಾರಿ ಮಾಡಬೇಕು. ಡೀಸಲ್ ಬೆಲೆ ಕಡಿಮೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಕಿಸಾನ್ ಯೋಜನೆ ಮೊತ್ತವನ್ನು ಕನಿಷ್ಠ 18 ಸಾವಿರಕ್ಕೆ ಏರಿಸಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆ ಹಾಳಾಗುತ್ತಿದ್ದು, ತಕ್ಷಣ ನಷ್ಟದ ಹಣ ನೀಡಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details