ಕರ್ನಾಟಕ

karnataka

ETV Bharat / state

ಗುಂಡ್ಲುಪೇಟೆ: ತೆರಕಣಾಂಬಿ ಕಾಲೇಜು ಸ್ಥಳಾಂತರ ಖಂಡಿಸಿ ಪ್ರತಿಭಟನೆ - Gundlupete Protest

ಈ ವೇಳೆ ಎಸ್‍ಡಿಪಿಐ ಪುರಸಭಾ ಸದಸ್ಯ ರಾಜ್ ಗೋಪಾಲ್ ಮಾತನಾಡಿ, ತೆರಕಣಾಂಬಿ ಗ್ರಾಮದಲ್ಲಿ ಸುಮಾರು 5 ವರ್ಷಗಳ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾರಂಭವಾಗಿದ್ದು, 3 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ. ಇದರ ಉದ್ಘಾಟನೆಗೂ ಮುನ್ನವೇ ಸ್ಥಳಾಂತರ ಆದೇಶ ಬಂದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತೆರಕಣಾಂಬಿ ಕಾಲೇಜು ಸ್ಥಳಾಂತರ ಖಂಡಿಸಿ ಪ್ರತಿಭಟನೆ
ತೆರಕಣಾಂಬಿ ಕಾಲೇಜು ಸ್ಥಳಾಂತರ ಖಂಡಿಸಿ ಪ್ರತಿಭಟನೆ

By

Published : Jul 28, 2020, 9:03 PM IST

ಗುಂಡ್ಲುಪೇಟೆ: ತೆರಕಣಾಂಬಿ ಕಾಲೇಜು ಸ್ಥಳಾಂತರ ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ಎಸ್‍ಡಿಪಿಐ ಕಾರ್ಯಕರ್ತರು ಸ್ಥಳೀಯ ಬಿಜೆಪಿ ಶಾಸಕ ಸಿ.ಎಸ್. ನಿರಂಜನಕುಮಾರ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಎಸ್‍ಡಿಪಿಐ ಪುರಸಭಾ ಸದಸ್ಯ ರಾಜ್ ಗೋಪಾಲ್ ಮಾತನಾಡಿ, ತೆರಕಣಾಂಬಿ ಗ್ರಾಮದಲ್ಲಿ ಸುಮಾರು 5 ವರ್ಷಗಳ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾರಂಭವಾಗಿದ್ದು, 3 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ. ಇದರ ಉದ್ಘಾಟನೆಗೂ ಮುನ್ನವೇ ಸ್ಥಳಾಂತರ ಆದೇಶ ಬಂದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತೆರಕಣಾಂಬಿ ಭಾಗದ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗಕ್ಕೆ ಬರುತ್ತಿದ್ದರು. ಈಗ ಅವರ ಸ್ಥಿತಿ ಅತಂತ್ರವಾಗಿದೆ. ಈ ಭಾಗದಲ್ಲಿ ಹಿಂದುಳಿದ ವರ್ಗದವರು ಹೆಚ್ಚಾಗಿ ವಾಸಿಸುತ್ತಿರುವ ಹಿನ್ನೆಲೆ ಅಲ್ಲಿನ ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ತುಂಬಾ ಉಪಯುಕ್ತವಾಗುತ್ತಿತ್ತು. ಸ್ಥಳಾಂತರದಿಂದ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರಾದ ಸಿ.ಎಸ್.ನಿರಂಜನಕುಮಾರ್ ಅವರು ಮುತುವರ್ಜಿ ವಹಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸ್ಥಳಾಂತರ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details