ಗುಂಡ್ಲುಪೇಟೆ: ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ ಅತಿಥಿ ಶಿಕ್ಷಕರು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಗುಂಡ್ಲುಪೇಟೆ: ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ, ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ - ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ
ಅತಿಥಿ ಶಿಕ್ಷಕರಾಗಿ ನಾವು ಇಲಾಖೆಯಲ್ಲಿ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತ ಬಂದಿದ್ದರೂ, ಕೆಲವು ಖಾಸಗಿ ಸಂಸ್ಥೆ ಮತ್ತು ಸರ್ಕಾರಿ ಶಾಲೆಗಳಲ್ಲಿ ನಮ್ಮನ್ನು ಕೈಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಜಿಲ್ಲಾ ಸಂಚಾಲಕಿ ಕಲಾವತಿ ಮಾತನಾಡಿ, ಕೊರೊನಾ ಸಂಕಷ್ಟದ ಕಾಲ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಉದ್ಯೋಗಗಳು ನಾಶವಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ನಮ್ಮ ಬೆನ್ನಿಗೆ ನಿಲ್ಲಬೇಕಿದೆ. ಅತಿಥಿ ಶಿಕ್ಷಕರಾಗಿ ನಾವು ಇಲಾಖೆಯಲ್ಲಿ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತ ಬಂದಿದ್ದರೂ, ಕೆಲವು ಖಾಸಗಿ ಸಂಸ್ಥೆ ಮತ್ತು ಸರ್ಕಾರಿ ಶಾಲೆಗಳಲ್ಲಿ ನಮ್ಮನ್ನು ಕೈಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಈ ಕೂಡಲೇ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಕೋವಿಡ್ ವಿಶೇಷ ಪ್ಯಾಕೆಜ್ ಘೋಷಿಸಬೇಕು. ಮುಂಬರುವ ಎಲ್ಲಾ ನೇಮಕಾತಿಗಳಲ್ಲಿ ಅತಿಥಿ ಶಿಕ್ಷಕರಿಗೆ ಪ್ರಾಧಾನ್ಯತೆ ನೀಡಿ, ಹಲವು ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಬೇಕು. ಸಂಬಳವನ್ನು ಹೆಚ್ಚಳ ಮಾಡಬೇಕು. ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಪ್ರಮಾಣ ಪತ್ರ ಹಾಗು ಗುರುತಿನ ಚೀಟಿ ನೀಡಬೇಕು. ಜೊತೆಗೆ ಪಿಎಫ್ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಶಿರಸ್ತೇದಾರ್ ಮಹೇಶ್ ಅವರಿಗೆ ಅತಿಥಿ ಶಿಕ್ಷಕರು ಮನವಿ ಸಲ್ಲಿಸಿದರು.