ಚಾಮರಾಜನಗರ: ಭಾನುವಾರ ಸಂಜೆಯಿಂದ ಇಂದು ಮುಂಜಾನೆಯವರೆಗೂ ಸುರಿದ ಜೋರು ಮಳೆಗೆ ಗಡಿ ಜಿಲ್ಲೆ ತತ್ತರಿಸಿದೆ. ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮ ಜಲಾವೃತವಾಗಿದೆ.
ರಾತ್ರಿ ಸುರಿದ ಮಳೆಗೆ ಗಡಿಜಿಲ್ಲೆ ಚಾಮರಾಜನಗರ ತತ್ತರ: ಗ್ರಾಮಗಳು ಜಲಾವೃತ - ಈಟಿವಿ ಭಾರತ್ ಕನ್ನಡ
ರಾತ್ರಿಯಿಡೀ ಸುರಿದ ಮಳೆಗೆ ಚಾಮರಾಜನಗರದ ಕೆಲ ಗ್ರಾಮಗಳು ಜಲಾವೃತವಾಗಿವೆ. ಹನೂರು ತಾಲೂಕಿನ ಹುಬ್ಬೆಹುಣಸೆ ಜಲಾಶಯ ತುಂಬಿದ್ದು ತಟ್ಟೆಹಳ್ಳ ಮೈದುಂಬಿ ಹರಿಯುತ್ತಿದೆ.
ರಾತ್ರಿ ಸುರಿದ ಮಳೆಗೆ ಗಡಿಜಿಲ್ಲೆ ಚಾಮರಾಜನಗರ ತತ್ತರ
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಕೆರೆ ತುಂಬಿ ಕೋಡಿಬಿದ್ದಿದ್ದು ದೊಡ್ಡಮೋಳೆ, ಕೃಷಿ ವಿಜ್ಞಾನ ಕೇಂದ್ರ, ಚಂದುಕಟ್ಟೆ ಮೋಳೆ ಗ್ರಾಮಕ್ಕೆ ನೀರು ನುಗ್ಗಿದ್ದು ರಸ್ತೆ ಮೇಲೆಲ್ಲಾ ನೀರು ಹರಿಯುತ್ತಿದ್ದು ಸಂಪರ್ಕ ಕಡಿತವಾಗಿದೆ. ಹನೂರು ತಾಲೂಕಿನ ಹುಬ್ಬೆಹುಣಸೆ ಜಲಾಶಯ ತುಂಬಿದೆ. ತಟ್ಟೆಹಳ್ಳ ತುಂಬಿ ಹರಿಯುತ್ತಿರುವ ಕಾರಣ ಜನರು ಹಳ್ಳ ದಾಟದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ರಾತ್ರಿ ಮಳೆಯೋ ಮಳೆ, ರಸ್ತೆಯೆಲ್ಲಾ ಹೊಳೆ: ಜನಜೀವನಕ್ಕೆ ತೊಂದರೆ