ಚಾಮರಾಜನಗರ:ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಥಳಿಸಿ ಕೊಂದಿರುವ ಘಟನೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿನ ಪುರಾಣಿ ಪೋಡಿನಲ್ಲಿ ನಡೆದಿದೆ.
ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದು ಪರಾರಿಯಾದ ಪತಿ - ಶೀಲ ಶಂಕಿಸಿ ಕೊಲೆ
ಪತ್ನಿಯ ಶೀಲ ಶಂಕಿಸಿ ಪತಿಯೇ ಥಳಿಸಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ. ದಿನನಿತ್ಯ ಕೌಟುಂಬಿಕ ವಿಚಾರವಾಗಿ ಗಲಾಟೆ ಮಾಡುತ್ತಿದ್ದ ಪತಿ ಆಕೆಯ ಶೀಲ ಶಂಕಿಸಿ ಕೊಲೆಗೈದಿದ್ದಾನೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದು ಪರಾರಿಯಾದ ಪತಿ
ಬೇದಮ್ಮ (25) ಮೃತ ದುರ್ದೈವಿಯಾಗಿದ್ದು, ಪತಿ ರಾಮಣ್ಣ ಪರಾರಿಯಾಗಿದ್ದಾನೆ. ಪತಿ-ಪತ್ನಿಯಲ್ಲಿ ಹೊಂದಾಣಿಕೆ ಕೊರತೆಯಿಂದಾಗಿ ನಿತ್ಯ ಜಗಳವಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆಯಷ್ಟೇ ಕೋಪಿಸಿಕೊಂಡು ತವರಿಗೆ ಹೋಗಿದ್ದ ಬೇದಮ್ಮ ಮರಳಿ ಮನೆಗೆ ಬಂದಿದ್ದಳು ಎನ್ನಲಾಗಿದೆ.
ಇಂದು ಮತ್ತೇ ಇಬ್ಬರ ನಡುವೆ ಗಲಾಟೆ ನಡೆದು ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಯಳಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪರಾರಿಯಾದ ಪತಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.