ಕರ್ನಾಟಕ

karnataka

ETV Bharat / state

ಗ್ರಾ.ಪಂ. ಚುನಾವಣೆಯಲ್ಲಿ ಪತ್ನಿ ಅವಿರೋಧ ಆಯ್ಕೆ: ಸಂಭ್ರಮಿಸಬೇಕಾಗಿದ್ದ ಪತಿಯೇ ಆತ್ಮಹತ್ಯೆ! - ಚಾಮರಾಜನಗರ ಆತ್ಮಹತ್ಯೆ ಸುದ್ದಿ

ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಮಹಿಳೆಯ ಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ. ಚಾಮಜರಾನಗರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

chamarajanagara
ಆತ್ಮಹತ್ಯೆ ಮಾಡಿಕೊಂಡ ಪತಿ

By

Published : Dec 16, 2020, 9:13 AM IST

ಚಾಮರಾಜನಗರ:ಗ್ರಾ.ಪಂ. ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಮಹಿಳೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯತ್​ ವ್ಯಾಪ್ತಿಯ ದೊಡ್ಡರಾಯಪೇಟೆಯಲ್ಲಿ ನಡೆದಿದೆ.

ನಿಂಗರಾಜು(27) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಮೃತನ ಪತ್ನಿ ಗಗನಾ ಎಂಬಾಕೆ ಎರಡು ದಿನಗಳ ಹಿಂದೆಯಷ್ಟೇ ಗ್ರಾಮದ ಎರಡನೇ ವಾರ್ಡಿನಿಂದ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ, ಪತ್ನಿಯ ಅವಿರೋಧ ಆಯ್ಕೆಯಿಂದ ಸಂತಸಗೊಂಡು ಸಂಭ್ರಮಿಸಬೇಕಾದ ಪತಿಯೇ ಬಾರದಲೋಕಕ್ಕೆ ಪಯಣ ಬೆಳೆಸಿದ್ದಾನೆ. ನಿಂಗರಾಜು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಈ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಚಾಮರಾಜನಗರ ಪೂರ್ವ ಠಾಣೆ ಪಿಎಸ್ಐ ತಿಳಿಸಿದ್ದಾರೆ.

ABOUT THE AUTHOR

...view details