ಚಾಮರಾಜನಗರ :ಶಾಕಸ ಎನ್. ಮಹೇಶ್ ಅವರು ಬಿಜೆಪಿ ಸೇರುತ್ತಾರೆ ಎಂದು ರಾಜಕೀಯ ವಲಯದಲ್ಲಿ ಆಗಾಗ ಕೇಳಿ ಬರುತ್ತಿರುವ ಹೇಳಿಕೆಗಳಿಗೆ ಸ್ವತಃ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರೇ ಬಿಜೆಪಿ ಸೇರ್ಪಡೆಯ ಬಗ್ಗೆ ಪಂಚಾಯತ್ ಅಧ್ಯಕ್ಷ ಚುನಾವಣೆ ಪ್ರಕ್ರಿಯೆ ಬಳಿಕ ಪಕ್ಷ ಸೇರ್ಪಡೆಯ ದಿನಾಂಕ ತಿಳಿಸುವುದಾಗಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಗ್ರಾಪಂ ಚುನಾವಣೆ ಮುಗಿದಿದೆ. ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಇರುವುದರಿಂದ ಈ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬಿಜೆಪಿ ಸೇರುವ ದಿನವನ್ನು ತಿಳಿಸುತ್ತೇನೆ ಎಂದು ತಿಳಿಸಿದರು.