ಕರ್ನಾಟಕ

karnataka

ETV Bharat / state

2020: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ - janapad-Academy Award Announcement

ಕರ್ನಾಟಕ ರಾಜ್ಯ ಅಕಾಡೆಮಿ ಪ್ರಶಸ್ತಿಯನ್ನು ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಅವರು ಪ್ರಕಟಿಸಿದರು.

janapad-Academy Award Announcement
ಅಕಾಡೆಮಿ ಅಧ್ಯಕ್ಷೆ ಮಂಜಮ್ಮ

By

Published : Jan 4, 2021, 2:59 PM IST

ಚಾಮರಾಜನಗರ:ಕರ್ನಾಟಕ ರಾಜ್ಯ ಅಕಾಡೆಮಿ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದ ಮತ್ತು ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗೆ ಆಯ್ಕೆಯಾದ ಕಲಾವಿದರು

2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಗಳನ್ನು ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಡಾ. ಜೀ.ಶಂ.ಪ ಪ್ರಶಸ್ತಿಗೆ ದಕ್ಷಿಣ ಕನ್ನಡದ ಡಾ. ಗಾಯತ್ರಿ ನಾವಡ ಹಾಗೂ ಡಾ.ಬಿ.ಎಸ್. ಗದ್ದಗೀಮಠ ಪ್ರಶಸ್ತಿಗೆ ಕಲಬುರಗಿಯ ಪ್ರೊ. ಬಸವರಾಜ ಸಬರದ ಅವರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗೆ ಆಯ್ಕೆಯಾದ ಕಲಾವಿದರು

ಚಾಮರಾಜನಗರದಲ್ಲೇ ಈ ಬಾರಿ ಪ್ರಶಸ್ತಿ ಸಮಾರಂಭ ಜರುಗಲಿದೆ. ಫೆಬ್ರುವರಿ ಮೊದಲ ವಾರದಲ್ಲಿ ಕಾರ್ಯಕ್ರಮ ನಡೆಸುವ ಚಿಂತನೆ ಇದೆ ಎಂದು ಅಧ್ಯಕ್ಷೆ ಹೇಳಿದರು.

ABOUT THE AUTHOR

...view details