ಚಾಮರಾಜನಗರ: ಟಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಜನಪ್ರಿಯ ನಟರಾದ, ಟಾಲಿವುಡ್ ಯಂಗ್ ಟೈಗರ್ ಜೂ.ಎನ್ಟಿಆರ್ ಕಳೆದ ಎರಡು ದಿನಗಳಿಂದ ಬಂಡೀಪುರ ಕಾಡಲ್ಲಿ ಸುತ್ತಾಡುತ್ತಿದ್ದು, ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಗೆ ಒಳಪಡುವ ಖಾಸಗಿ ರೆಸಾರ್ಟ್ನಲ್ಲಿ ಬೀಡು ಬಿಟ್ಟಿರುವ ತಾರಕ್, ನಿತ್ಯ ಸಫಾರಿ ನಡೆಸಿ ಕಾಡಿನ ಚೆಲುವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.