ಕರ್ನಾಟಕ

karnataka

ETV Bharat / state

ಚಾಮರಾಜನಗರದ ಎಲ್ಲ ಶಾಸಕರಿಂದ ಮತದಾನ: ಪೆನ್ ಸರಿಯಿಲ್ಲ ಎಂದು ಹರಿಹಾಯ್ದ ಪುಟ್ಟರಂಗಶೆಟ್ಟಿ

ಸಿಬ್ಬಂದಿ ಕೊಟ್ಟಿರುವ ಪೆನ್ ನಲ್ಲಿ ಬರೆದರೆ ಸರಿಯಾಗಿ ಕಾಣುವುದೇ ಇಲ್ಲ. ನಾವು ಯಾರಿಗೆ ಮತದಾನ ಮಾಡಿದ್ದೇವೆಂದು ಗೊತ್ತಾಗುವುದು ಹೇಗೆ? ಎಂದು ಶಾಸಕ ಪುಟ್ಟರಂಗಶೆಟ್ಟಿ ಮತಗಟ್ಟೆ ಸಿಬ್ಬಂದಿ ವಿರುದ್ಧ ಹರಿಹಾಯ್ದರು‌.

All Chamarajanagar MLAs cast vote

By

Published : Jun 13, 2022, 1:11 PM IST

ಚಾಮರಾಜನಗರ: ದಕ್ಷಿಣ ಪದವೀಧರರ ಚುನಾವಣೆಯ ಮತದಾನ ಜಿಲ್ಲೆಯಲ್ಲಿ ಬಿರುಸಿನಿಂದ ನಡೆಯುತ್ತಿದ್ದು, ಜಿಲ್ಲೆಯ ನಾಲ್ವರು ಶಾಸಕರು ತಮ್ಮ ಹಕ್ಕು ಚಲಾಯಿಸಿದರು. ಚಾಮರಾಜನಗರ ಶಾಸಕ ಯಳಂದೂರು ತಾಲೂಕು ಕಚೇರಿಯಲ್ಲಿ, ಕೊಳ್ಳೇಗಾಲದ ಶಾಸಕ ಎನ್‌.ಮಹೇಶ್ ಹಾಗೂ ಹನೂರು ಶಾಸಕ ಆರ್.ನರೇಂದ್ರ ಮತ್ತು ಗುಂಡ್ಲುಪೇಟೆಯಲ್ಲಿ, ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ ಕುಮಾರ್, ಚಾಮರಾಜನಗರದಲ್ಲಿ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಮತ ಚಲಾಯಿಸಿದರು.

ಮತಗಟ್ಟೆ ಸಿಬ್ಬಂದಿ ವಿರುದ್ಧ ಮತಗಟ್ಟೆ ಸಿಬ್ಬಂದಿ ವಿರುದ್ಧ

ಬ್ಯಾಲೆಟ್ ಪೇಪರ್​​ನಲ್ಲಿ ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದು, ಸಿಬ್ಬಂದಿ ಕೊಟ್ಟಿರುವ ಪೆನ್ ನಲ್ಲಿ ಬರೆದರೆ ಸರಿಯಾಗಿ ಕಾಣುವುದೇ ಇಲ್ಲ. ನಾವು ಯಾರಿಗೆ ಮತದಾನ ಮಾಡಿದ್ದೇವೆಂದು ಗೊತ್ತಾಗುವುದು ಹೇಗೆ? ಎಂದು ಶಾಸಕ ಪುಟ್ಟರಂಗಶೆಟ್ಟಿ ಮತಗಟ್ಟೆ ಸಿಬ್ಬಂದಿ ವಿರುದ್ಧ ಹರಿಹಾಯ್ದರು‌. ನಾವು ತಂದಿರುವುದಲ್ಲ ಸರ್, ಇಲಾಖೆಯೇ ಕೊಟ್ಟಿರುವ ಪೆನ್ ಇದು ಎಂದು ಸಿಬ್ಬಂದಿ ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರಾದರೂ, ಪುಟ್ಟರಂಗಶೆಟ್ಟಿ ಕೋಪ ತಣಿಯಲಿಲ್ಲ. ಅಸಮಾಧಾನದಿಂದಲೇ ಮತದಾನ ಮಾಡಿ ಮತಗಟ್ಟೆಯಿಂದ ನಿರ್ಗಮಿಸಿದರು.

ಚಾಮರಾಜನಗರದ ಎಲ್ಲಾ ಶಾಸಕರಿಂದ ಮತದಾನ

ಇನ್ನು, ಎನ್.ಮಹೇಶ್ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರದ ಎಲ್ಲಾ ಶಾಸಕರಿಂದ ಮತದಾನ

ಇದನ್ನೂ ಓದಿ:ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ಚುರುಕು: ಮಂದಗತಿಯಲ್ಲಿ ಸಾಗುತ್ತಿರುವ ಪದವೀಧರರ ಕ್ಷೇತ್ರದ ಮತದಾನ

ABOUT THE AUTHOR

...view details