ಕರ್ನಾಟಕ

karnataka

ETV Bharat / state

ವಿಧಾನಸಭೆಯಲ್ಲಿ ರೈತರ ಪರ ಧ್ವನಿ ಎತ್ತುವಂತೆ ಶಾಸಕರಿಗೆ ರೈತ ಮುಖಂಡರ ಒತ್ತಾಯ - Kollegal news

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯಲ್ಲಿ ಸುಗ್ರಿವಾಜ್ಞೆ ತಂದು ರೈತರ ಅಸ್ತಿತ್ವವನ್ನು ನಾಶ ಮಾಡುತ್ತಿದೆ. ರೈತ ಸಂಘಗಳು ಈ ನಡೆಯನ್ನು ಖಂಡಿಸುತ್ತದೆ..

appeal
ಮನವಿ

By

Published : Sep 15, 2020, 7:58 PM IST

ಕೊಳ್ಳೇಗಾಲ :ಸೆ.21ರಂದು ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತೆಗೆದುಕೊಂಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯ ಸುಗ್ರಿವಾಜ್ಞೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಾಸಕ ಎನ್ ಮಹೇಶ್ ಅವರಿಗೆ ರೈತ ಮುಖಂಡರು ಮನವಿ ಪತ್ರ ಸಲ್ಲಿಸಿದರು.

ಶಾಸಕರಿಗೆ ಮನವಿ ಸಲ್ಲಿಸಿದ ರೈತರು

ಇದೇ ವೇಳೆ ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಶೈಲೇಂದ್ರ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ತಂದು ಬಂಡವಾಳಶಾಹಿಗಳ ಪರ ಕೆಲಸ ಮಾಡುತ್ತಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯಲ್ಲಿ ಸುಗ್ರಿವಾಜ್ಞೆ ತಂದು ರೈತರ ಅಸ್ತಿತ್ವವನ್ನು ನಾಶ ಮಾಡುತ್ತಿದೆ. ರೈತ ಸಂಘಗಳು ಈ ನಡೆಯನ್ನು ಖಂಡಿಸುತ್ತದೆ. ನಮ್ಮ ಭಾಗದ ಶಾಸಕ ಎನ್ ಮಹೇಶ್ ಹಾಗೂ ನರೇಂದ್ರ ಅವರು ಮುಂಬರುವ ಅಧಿವೇಶನದಲ್ಲಿ ರೈತರ ಹೋರಾಟದ ಪರ ನಿಲ್ಲಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

ಮನವಿ ಪತ್ರ ಸ್ವೀಕರಿಸಿ ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಎನ್.ಮಹೇಶ್ ಹಾಗೂ ನರೇಂದ್ರ ಅವರು ನಾನು ಯಾವಾಗಲು ರೈತರ ಪರ ಹಾಗಾಗಿ ವಿಧಾನಸಭೆಯ ಅಧಿವೇಶನದಲ್ಲಿ ರೈತರ ಪರ ನಿಲ್ಲುವುದಾಗಿ ಭರವಸೆ ನೀಡಿದರು. ನಂತರ ಹನೂರು ಶಾಸಕ ನರೇಂದ್ರ ಅವರಿಗೂ ಈ ಬಗ್ಗೆ ದ್ವನಿ ಎತ್ತುವಂತೆ ಮನವಿ ಮಾಡಿದರು.

ABOUT THE AUTHOR

...view details