ಕರ್ನಾಟಕ

karnataka

ETV Bharat / state

ಲಾಕ್​​ಡೌನ್​​ ಎಫೆಕ್ಟ್: ಮಗುವಿಗೆ ಚಿಕಿತ್ಸೆ ಕೊಡಿಸಲಾಗದೆ ಪೋಷಕರ ಪರದಾಟ! - migrant workers problem in kollegala

ಲಾಕ್​​ಡೌನ್​ ಪರಿಣಾಮ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗದೆ ಹೆತ್ತವರ ಸಂಕಟ ಪಡುತ್ತಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ನಡೆದಿದೆ.

kollegal-migrant-worker-daughter-suffering
ಮಗುವಿಗೆ ಚಿಕಿತ್ಸೆ ಕೊಡಿಸಲಾಗದೆ ನರಳುತ್ತಿರುವ ಪೋಷಕರು

By

Published : Apr 11, 2020, 2:33 PM IST

ಕೊಳ್ಳೇಗಾಲ: ಕೂಲಿಗಾಗಿ ಬಂದ ಧಾರವಾಡ ಮೂಲದ 14 ವಲಸೆ ಕಾರ್ಮಿಕರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರ ಕಷ್ಟ ಹೇಳತೀರದಾಗಿದೆ. ಈ ಕಾರ್ಮಿಕರ ಪೈಕಿ ಗುರುನಾಥ್ ಮತ್ತು ತುಳಸಮ್ಮನ ಚಿಕ್ಕ ಮಗುವಿಗೆ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಹೆತ್ತವರು ಒದ್ದಾಡುತ್ತಿದ್ದಾರೆ.

ಮಗುವಿಗೆ ಚಿಕಿತ್ಸೆ ಕೊಡಿಸಲಾಗದೆ ನರಳುತ್ತಿರುವ ಪೋಷಕರು
ಕೊಳ್ಳೇಗಾಲ ಚೆಸ್ಕಾಂ ಕಟ್ಟಡ ನಿರ್ಮಾಣಕ್ಕೆ ಬಂದಿರುವ ಧಾರವಾಡ ಮೂಲದ ಕುಂಬಾರಕೊಪ್ಪ ಗ್ರಾಮದ ಗುರುನಾಥ್ ಹಾಗೂ ತುಳಸಮ್ಮ ಎಂಬುವವರ ಮಗುವಿಗೆ ಚಿಕ್ಕ ವಯಸ್ಸಿನಿಂದಲೂ ನರ ದೌರ್ಬಲ್ಯ ಸಮಸ್ಯೆ ಇದೆ. 3 ತಿಂಗಳಿಗೊಮ್ಮೆ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ಮಗುವನ್ನು ಚೆಕ್​​ಅಪ್​ಗೆ ಕರೆದುಕೊಂಡು ಹೋಗಬೇಕು. ಆದರೆ ಲಾಕ್​ಡೌನ್ ಪರಿಣಾಮ ಬೆಳಗಾವಿಗೆ ತೆರಳಿ ಚಿಕಿತ್ಸೆ ಕೊಡಿಸಲು ಸಾಧ್ಯವಾಗದ ಕಾರಣ ಮಗು ದಿನವಿಡೀ ಅಳುತ್ತಿದೆ ಎಂದು ತಂದೆ ಗುರುನಾಥ್ ಸುದ್ದಿಗಾರರ ಜೊತೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಜಿಲ್ಲಾಡಳಿತ ಮಗುವಿನ ಆರೋಗ್ಯದ ದೃಷ್ಟಿಯಿಂದ ಚಿಕಿತ್ಸೆಗಾಗಿ ಬೆಳಗಾವಿಗೆ ಆಸ್ಪತ್ರೆಗೆ ಕಳುಹಿಸಿಕೊಡಬೇಕು. ಕುಟುಂಬ ತೊರೆದು ವಲಸೆ ಬಂದಿದ್ದೇವೆ. ದಯಮಾಡಿ ಸಹಾಯ ಮಾಡಬೇಕು ಎಂದು ವಲಸೆ ಕಾರ್ಮಿಕರು ಮನವಿ ಮಾಡಿದ್ದಾರೆ.

ABOUT THE AUTHOR

...view details