ಚಾಮರಾಜನಗರ: ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ಮಂಗಳವಾರ ನಡೆದಿದೆ.
ಕೊಳ್ಳೇಗಾಲ ಉಪವಿಭಾಗದ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಗಣೇಶ್ ಕುಮಾರ್ ಮೃತ ದುರ್ದೈವಿ. ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟು ಮೈಸೂರಿನ ತಮ್ಮ ನಿವಾಸದಲ್ಲಿ ಹೋಂ ಐಸೋಲೇಷನ್ನಲ್ಲಿದ್ದರು. ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆ ಮೈಸೂರಿನ ಮೇಟಗಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.