ಕೊಳ್ಳೇಗಾಲ: ಪಟ್ಟಣದ ಅಚ್ಗಾಳ್ನಿಂದ ತಾಲೂಕು ಪಂಚಾಯಿತಿ ವೃತ್ತದವರೆಗಿನ ರಸ್ತೆಗೆ ನಟ ಪುನೀತ್ ರಾಜ್ಕುಮಾರ್ ಅವರ ಹೆಸರಿಡಲು ತೀರ್ಮಾನಿಸಲಾಗಿದೆ. ಅಲ್ಲದೇ ಅಪ್ಪು ಪ್ರತಿಮೆಯನ್ನೂ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎನ್.ಮಹೇಶ್ ತಿಳಿಸಿದ್ದಾರೆ.
ಕೊಳ್ಳೇಗಾಲದ ರಸ್ತೆಗೆ ನಟ ಪುನೀತ್ ಹೆಸರಿಡಲು ತೀರ್ಮಾನ: ಶಾಸಕ ಎನ್.ಮಹೇಶ್
ಜಿಲ್ಲಾಧಿಕಾರಿ, ನಗರಸಭೆ ಹಾಗೂ ಅಧ್ಯಕ್ಷರಿಗೆ ಪತ್ರ ಬರೆಯುತ್ತೇನೆ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪುನೀತ್ ಹೆಸರಿಡಲು ಬೇಕಾದ ಪ್ರಕ್ರಿಯೆಗೆ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳುತ್ತೇನೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ, ಶಿವರಾಜ್ ಕುಮಾರ್ ಅಭಿಮಾನಿ ಸಂಘ ಸೇರಿದಂತೆ ಇನ್ನಿತರ ಕನ್ನಡಪರ ಸಂಘಟನೆಗಳು ಕೊಳ್ಳೇಗಾಲದ ಯಾವುದಾದರೂ ರಸ್ತೆಗೆ ಪುನೀತ್ ಹೆಸರಿಡಬೇಕು ಎಂದು ಒತ್ತಾಯಿಸಿದ್ದರು. ಅದರಂತೆ ಅಚ್ಗಾಳ್ನಿಂದ ತಾಲೂಕು ಪಂಚಾಯಿತಿ ವೃತ್ತದವರೆಗಿನ ರಸ್ತೆಗೆ ಅಪ್ಪು ಹೆಸರಿಡಲು ತೀರ್ಮಾನಿಸಲಾಗಿದೆ ಎಂದರು.
ಈ ಬಗ್ಗೆ ಜಿಲ್ಲಾಧಿಕಾರಿ, ನಗರಸಭೆ ಹಾಗೂ ಅಧ್ಯಕ್ಷರಿಗೆ ಪತ್ರ ಬರೆಯುತ್ತೇನೆ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪುನೀತ್ ಹೆಸರಿಡಲು ಬೇಕಾದ ಪ್ರಕ್ರಿಯೆಗೆ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.