ಕೊಳ್ಳೇಗಾಲ:ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ನೀಡೋಕೆ ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ಹಣ ಯಾವುದಕ್ಕೂ ಸಾಲುವುದಿಲ್ಲ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಕೊಡಬೇಕು ಆಗ್ರಹಿಸಿದ್ದರು. ಅಂದರಂತೆ ಪರಿಹಾರದ ಹಣವನ್ನು ಹೆಚ್ಚಿಸಬೇಕು ಎಂದು ಮಾಜಿ ಶಾಸಕ ಎ.ಆರ್.ಕೃಷ್ಣ ಮೂರ್ತಿ ಒತ್ತಾಯಿಸಿದ್ದಾರೆ.
ಜಿಲ್ಲಾ ಹಾಗೂ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಸಿಬ್ಬಂದಿ ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಆಹಾರ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಅವರು, ಮೇ. 2ರಂದು ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಿಂದ ಸಾಲು-ಸಾಲು ಸಾವಾಗಿದ್ದು, ಮೃತರ ಕುಟುಂಬಗಳು ಬೀದಿಗೆ ಬಿದ್ದಿವೆ. ಈ ಘೋರ ಅವಘಡಕ್ಕೆ ಬಲಿಯಾದ ಕುಟುಂಬಕ್ಕೆ ಕೇವಲ 2 ಲಕ್ಷ ನೀಡುತ್ತಿರುವುದು ಸರ್ಕಾರಕ್ಕೆ ನಾಚಿಕೆ ಆಗಬೇಕು. ಈ ಹಿಂದೆ 25 ಲಕ್ಷ ರೂ. ನೀಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಅದರಂತೆ ಪರಿಹಾರ ಹಣವನ್ನು ಹೆಚ್ವಿಸಬೇಕು. ಬೇರೆ-ಬೇರೆ ರಾಜ್ಯಗಳಲ್ಲಿ ಕನಿಷ್ಠ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಪರಿಹಾರ ಹಣವನ್ನು ಹೆಚ್ಚಿಸಬೇಕೆಂದು ರಾಜ್ಯ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಪರವಾಗಿ ಒತ್ತಾಯಿಸುತ್ತೇನೆ ಎಂದರು.
ರಾಜೀವ್ ಗಾಂಧಿ ಪುಣ್ಯ ಸ್ಮರಣಾರ್ಥ ಆಹಾರ ವಿತರಣೆ