ತುಮಕೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಜಿಲ್ಲೆಯ ಕುಣಿಗಲ್ ಪಟ್ಟಣ ಬಂದ್ಗೆ ಡಿಕೆಶಿ ಬೆಂಬಲಿಗರು ಕರೆ ನೀಡಿದ್ದಾರೆ. ಇಂದು ಬೆಳಗ್ಗೆ ರಸ್ತೆಗಿಳಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪಟ್ಟಣದಲ್ಲಿ ವಾಹನ ಸಂಚಾರ ಹಾಗೂ ಜನಸಂಚಾರ ವಿರಳವಾಗಿತ್ತು. ಬೆಳ್ಳಂಬೆಳಗ್ಗೆ ಸದಾ ಗಿಜಿಗುಡುತ್ತಿದ್ದ ಖಾಸಗಿ ಬಸ್ ನಿಲ್ದಾಣದಲ್ಲಿ ಜನಸಂಚಾರ ಕಡಿಮೆ ಇತ್ತು. ಅಲ್ಲದೆ ಕುಣಿಗಲ್ ಪಟ್ಟಣದೆಲ್ಲೆಡೆ ಆಟೋದಲ್ಲಿ ಬೆಳಗ್ಗೆಯಿಂದಲೂ ಬಂದ್ಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕುಣಿಗಲ್ ಪಟ್ಟಣ, ಹನೂರು ಬಂದ್ಗೆ ಕರೆ ಚಾಮರಾಜನಗರ, ಗುಂಡ್ಲುಪೇಟೆಯಲ್ಲಿ ಪ್ರೊಟೆಸ್ಟ್: ಹನೂರು ಬಂದ್ ಗೆ ಕರೆ
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿದೆ. ಜಿಲ್ಲಾಕೇಂದ್ರದಲ್ಲಿ ಶಾಸಕ ಪುಟ್ಟರಂಗಶೆಟ್ಟಿ, ಮಾಜಿ ಸಂಸದ ಆರ್.ಧ್ರುವನಾರಾಯಣ ನೇತೃತ್ವದಲ್ಲಿ ಬೆಳಗ್ಗೆ 11ಕ್ಕೆ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ಮಾಡಿ ಕೆಲಕಾಲ ರಾ.ಹೆದ್ದಾರಿಯನ್ನು ತಡೆಯಲಿದ್ದಾರೆ.
ಗುಂಡ್ಲುಪೇಟೆಯಲ್ಲಿ ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವರು.ಇನ್ನು, ಶಾಸಕ ಆರ್. ನರೇಂದ್ರ ನೇತೃತ್ವದಲ್ಲಿ ಹನೂರು ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಸಂಜೆ 4 ರತನಕ ಪಟ್ಟಣ ಕಾಂಗ್ರೆಸ್ ಬಂದ್ಗೆ ಕರೆ ನೀಡಿದೆ.