ಕರ್ನಾಟಕ

karnataka

ETV Bharat / state

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬು ತುಂಬಿದ ಲಾರಿ ಪಲ್ಟಿ: ಬೈಕ್ ಜಖಂ - ಚಾಲಕನ ನಿಯಂತ್ರಣ ತಪ್ಪಿ ಕಬ್ಬು ತುಂಬಿದ ಲಾರಿ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಕಬ್ಬು ತುಂಬಿದ ಲಾರಿ ಪಲ್ಟಿಯಾಗಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ನಜ್ಜುಗುಜ್ಜಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ

By

Published : Sep 22, 2019, 6:31 PM IST

Updated : Sep 22, 2019, 6:47 PM IST

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕಬ್ಬು ತುಂಬಿದ ಲಾರಿ ಪಲ್ಟಿಯಾದ ಘಟನೆ ನಗರದ ವಿಜಯ ಬ್ಯಾಂಕ್ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ

ತಮಿಳುನಾಡಿಗೆ ತೆರಳುತ್ತಿದ್ದ ಕಬ್ಬಿನ ಲಾರಿ, ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ನಜ್ಜುಗುಜ್ಜಾಯಿತು. ಎಟಿಎಂನಿಂದ ಹಣ ತರಲೆಂದು ತೆರಳಿದ ಯುವಕನ ಬೈಕ್ ಇದಾಗಿತ್ತು ಎಂದು ತಿಳಿದುಬಂದಿದ್ದು, ಲಾರಿ ಬಿದ್ದ ರಭಸಕ್ಕೆ ಎಟಿಎಂ ನ ಬಾಗಿಲು ಕೂಡ ಮುರಿದಿದೆ.

ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಲಾರಿ ಪಲ್ಟಿಯಾದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Last Updated : Sep 22, 2019, 6:47 PM IST

ABOUT THE AUTHOR

...view details