ಚಾಮರಾಜನಗರ :ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಸಮೀಪದ ರಸ್ತೆಯಲ್ಲಿ ನಡೆದಿದೆ.
ಮಾಂಬಳ್ಳಿ ಗ್ರಾಮದ ಪ್ರೇಮಿಗಳಾದ ಕಾಂಚನಾ (20), ಶ್ರೀನಿವಾಸ್ (23) ಎಂಬುವರು ಆತ್ಮಹತ್ಯೆಗೆ ಶರಣಾದವರು. ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದು, ಶ್ರೀನಿವಾಸ್ ಚಾಲಕ ವೃತ್ತಿ ಮಾಡುತ್ತಿದ್ದರು.