ಚಾಮರಾಜನಗರ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾಣೆಯಲ್ಲಿ ನಡೆದಿದೆ.
ಮಹದೇಶ್ವರ ಬೆಟ್ಟದ ತಪ್ಪಲಲ್ಲಿ ಸಿಡಿಲು ಬಡಿದು ಯುವಕ ಸಾವು - ಸಿಡಿಲು ಬಡಿದು ಯುವಕ ಸಾವು
ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾಣೆಯಲ್ಲಿ ಯುವಕನೋರ್ವ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ನಡೆದಿದೆ.

ಸಿಡಿಲು ಬಡಿದು ಯುವಕ ಸಾವು
ಮಹದೇವಸ್ವಾಮಿ (19) ಮೃತ ವ್ಯಕ್ತಿ. ಮೃತನ ಕುಟುಂಬದವರು ಜಮೀನಿನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದ್ದು, ಇಂದು ಸಂಜೆ ಸುರಿದ ಗುಡುಗು ಸಹಿತ ಭಾರಿ ಮಳೆಯಲ್ಲಿ ಹೊರಗೆ ಕುಳಿತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಮೃತನ ಸಂಬಂಧಿಗಳು ಪೊಲೀಸ್ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.