ಚಾಮರಾಜನಗರ:ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿ ಆನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಸಮೀಪದ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ದೊಡ್ಡಮೂಡಹಳ್ಳಿ ಗ್ರಾಮದ ಚಾಟಿನಿಂಗಯ್ಯ (52) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದು ಹೋಗುತ್ತಿರುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.