ಚಾಮರಾಜನಗರ :ಪ್ರೀತ್ಸೆ ಪ್ರೀತ್ಸೆ ಎಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕ ಪ್ರೇಮಿಗೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನ್ ಪುರಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ತಾಲೂಕಿನ ಲಿಂಗರಾಜಪುರ ಗ್ರಾಮದ ಪ್ರಸಾದ್ ಕುಮಾರ್ (20) ಶಿಕ್ಷೆಗೊಳಗಾದ ಆರೋಪಿ. 2019ರ ಮೇ 27ರಂದು ಅದೇ ಗ್ರಾಮದ 16 ವರ್ಷದ ಬಾಲಕಿಯೊಬ್ಬಳು ಮನೆ ಮುಂದೆ ನಿಂತಿದ್ದ ವೇಳೆ " ಬಲವಂತದಿಂದ ಆಕೆಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ತಾನು ಪ್ರೀತಿಸುತ್ತಿದ್ದು, ನೀನು ಪ್ರೀತಿಸಬೇಕೆಂದು ಒತ್ತಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ.