ಚಾಮರಾಜನಗರ:ಕೋವಿಡ್-19 ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ರೂಪಿಸಿರುವ 'ಮಾಸ್ಕ್ ಡೇ'ಯನ್ನು (ಮುಖಗವಸು ದಿನ) ಇಂದು ಚಾಮರಾಜನಗರ ಜಿಲ್ಲಾದ್ಯಂತ ಜಾಥಾ ಮೂಲಕ ಆಚರಿಸಿ, ಅರಿವು ಮೂಡಿಸಲಾಯಿತು.
ಜಿಲ್ಲಾಡಳಿತದ ವತಿಯಿಂದ ನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಜಿಲ್ಲಾಡಳಿತ ಭವನದವರೆಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಎಸ್ಪಿ ಎಚ್.ಡಿ.ಆನಂದಕುಮಾರ್, ಡಿಎಚ್ಒ ಡಾ.ರವಿ, ನಗರಸಭೆ ಆಯುಕ್ತ ರಾಜಣ್ಣ ನೇತೃತ್ವದಲ್ಲಿ ಜಾಥಾ ನಡೆಸಲಾಯಿತು.