ಚಾಮರಾಜನಗರ:ಕೌಟುಂಬಿಕ ಕಲಹದಿಂದಾಗಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಕುಡುಕ ಪತಿಯ ಕಾಟ ತಾಳಲಾರದೇ ಮನನೊಂದ ಪತ್ನಿ ತನ್ನ ಮಕ್ಕಳೊಟ್ಟಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಬಾಲಕಿ ಸಾವನಪ್ಪಿದ್ದಾಳೆ. 8 ವರ್ಷದ ಮಗಳು ಮೃತಪಟ್ಟಿದ್ದಾಳೆ. ಹೆಂಡತಿ-ಮಕ್ಕಳು ವಿಷ ಸೇವಿಸಿದ ವಿಚಾರ ತಿಳಿದು ಪತಿ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ತಾಲೂಕು ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರತಿಭಟನಾಕಾರರು
ಕುಡಿತದಿಂದ ಕೌಟುಂಬಿಕ ಕಲಹ:ಮಾದೇಶ್ ಎಂಬಾತ ನಿತ್ಯ ಕುಡಿದು ಗಲಾಟೆ ಮಾಡಿ ಹೆಂಡತಿಗೆ ಥಳಿಸುತ್ತಿದ್ದನಂತೆ. ಇದರಿಂದ ಬೇಸತ್ತ ಪತ್ನಿ ಶೀಲಾ(29) ಇಂದು ಬೆಳಗ್ಗೆ 8 ವರ್ಷದ ಮಗಳು ಹಾಗೂ 12 ವರ್ಷದ ಮಗನಿಗೆ ವಿಷ ಕುಡಿಸಿ ಬಳಿಕ ತಾನೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಮಗಳು ಮೃತಪಟ್ಟಿದ್ದು, ತಾಯಿ ಹಾಗೂ ಮಗನ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೆಂಡತಿ ಹಾಗೂ ಮಕ್ಕಳು ವಿಷ ಕುಡಿದ ವಿಚಾರ ತಿಳಿದ ಪತಿ ಮಾದೇಶ್ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಡಿಸಿ ಕಚೇರಿಯಲ್ಲಿ ಮೂವರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಯತ್ನ.. ಮಹಿಳಾ ದಿನಾಚರಣೆಯಂದು ಮನಕಲಕುವ ಘಟನೆ
ಇತ್ತೀಚೆಗೆ ನಡೆದ ಪ್ರಕರಣಗಳನ್ನು ನೋಡುವುದಾದರೆ..
- ಆತ್ಮಹತ್ಯೆ ಯತ್ನ.. ಒಂದೇ ಕುಟುಂಬದ ಮೂವರು ಸಾವು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ ಮೂವರು ಸಾವನ್ನಪ್ಪಿದ ದುರಂತ ಘಟನೆ ಇತ್ತೀಚೆಗೆ ನಡೆದಿತ್ತು. ಆತ್ಮಹತ್ಯೆ ವೇಳೆ ಇಬ್ಬರು ಮಕ್ಕಳು, ಪತ್ನಿ ಸಾವನ್ನಪ್ಪಿದ್ದರು. ಪತ್ನಿ ನೇತ್ರಾವತಿ ಮತ್ತು ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿರಲಿಲ್ಲ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಇದನ್ನೂ ಓದಿ:ಆತ್ಮಹತ್ಯೆ ಯತ್ನ: ಒಂದೇ ಕುಟುಂಬದ ಮೂವರು ಸಾವು.. ಪತಿ ಸ್ಥಿತಿ ಗಂಭೀರ
- ಒಂದೇ ಕುಟುಂಬದಿಂದ ನಾಲ್ವರಿಂದ ಆತ್ಮಹತ್ಯೆ ಯತ್ನ: ನೀರಿನ ಟ್ಯಾಂಕ್ ಕಟ್ಟಲು ನಿರ್ಮಾಣ ಹಂತದ ಮನೆಯ ತಡೆಗೋಡೆ ಕೆಡವಿದ್ದರಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಇತ್ತೀಚೆಗೆ ಬಳ್ಳಾರಿ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಘಟನೆ ನಡೆದಿತ್ತು. ರಾಜೇಶ್, ಶೇಖಪ್ಪ, ಸುಶೀಲಮ್ಮ ಮತ್ತು ಜ್ಯೋತಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆದಿದ್ದರು.
ಇದನ್ನೂ ಓದಿ:ಬಳ್ಳಾರಿ: ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ