ಚಾಮರಾಜನಗರ:ಸೌದೆ ತರಲು ಹೋಗುತ್ತೇನೆಂದು ತೆರಳಿದ ಮಾನಸಿಕ ಅಸ್ವಸ್ಥನೋರ್ವ ನೇಣಿಗೆ ಶರಣಾಗಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಸೌದೆ ತರುತ್ತೇನೆಂದು ಹೋದ ಮಾನಸಿಕ ಅಸ್ವಸ್ಥ ನೇಣಿಗೆ ಶರಣು! - chamarajanagara news mentally ill sucide
ಸೌದೆ ತರಲು ಹೋಗುತ್ತೇನೆಂದು ತೆರಳಿದ ಮಾನಸಿಕ ಅಸ್ವಸ್ಥನೋರ್ವ ನೇಣಿಗೆ ಶರಣಾಗಿರುವ ಘಟನೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮಾನಸಿಕ ಅಸ್ವಸ್ಥ ನೇಣಿಗೆ ಶರಣು
ಹನೂರು ತಾಲೂಕಿನ ಅರೆಕಡುವಿನ ದೊಡ್ಡಿ ಗ್ರಾಮದ ಮಣಿ (24) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿಗೆ ತೆರಳಿದಾಗ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ. ಕೂಡಲೇ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.
ಮೃತನು ಮಾನಸಿಕ ಅಸ್ವಸ್ಥನಾಗಿದ್ದು, ಹಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗ್ತಿದೆ. ಇನ್ನು ಈ ಪ್ರಕರಣ ಹನೂರು ಠಾಣೆಯಲ್ಲಿ ದಾಖಲಾಗಿದೆ.